ಚಿತ್ರದುರ್ಗ:ವಿದ್ಯುತ್ ಸ್ಪರ್ಶಿಸಿ ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದಾಪುರ ಗ್ರಾಮದಲ್ಲಿ ಸಂಭವಿಸಿದೆ.
ವಿದ್ಯುತ್ ಸ್ಪರ್ಶಿಸಿ ಶಾಲಾ ವಿದ್ಯಾರ್ಥಿನಿ ಸಾವು - ಮುದ್ದಾಪುರ ಗ್ರಾಮ
ವಿದ್ಯುತ್ ಸ್ಪರ್ಶಿಸಿ ಶಾಲಾ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುದ್ದಾಪುರ ಗ್ರಾಮದಲ್ಲಿ ಸಂಭವಿಸಿದೆ.
ಶಾಲಾ ವಿದ್ಯಾರ್ಥಿನಿ ಸಾವು
ಸಿಂಧು (10) ಮೃತ ವಿದ್ಯಾರ್ಥಿನಿ ಎಂದು ತಿಳಿದು ಬಂದಿದೆ. ಗ್ರಾಮ ಪಂಚಾಯತಿ ಬೋರ್ಡ್‌ನಲ್ಲಿ ಪ್ರವಹಿಸಿದ ವಿದ್ಯುತ್ ಬೋರ್ಡ್ ಮುಟ್ಟಿದಾಗ ಅವಘಡ ಸಂಭವಿಸಿದೆ. ತುರುವನೂರು ಹೋಬಳಿಯ ಮುದ್ದಾಪುರ ಗ್ರಾಮ ಪಂಚಾಯತಿ ಆವರಣದಲ್ಲಿ ಘಟನೆ ನಡೆದಿದೆ.
ಮಳೆಗೆ ಗ್ರೌಂಡಿಂಗ್ ಆಗಿ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ. ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಘಟನೆ ನಡೆದಿದೆ ಎಂದು ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.