ಕರ್ನಾಟಕ

karnataka

ETV Bharat / state

ಮಳೆಯಿಂದ ಶಾಲೆ ಗೋಡೆ ಕುಸಿತ: ತಪ್ಪಿದ ಅನಾಹುತ - kannadanews

ಮಳೆ ಬಂದು ಶಾಲೆ ಗೋಡೆ ಕುಸಿದಿದ್ದು, ದೊಡ್ಡ ಅನಾಹುತ ತಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವೀರವ್ವ ನಾಗತಿಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಘಟನೆ ನಡೆದಿದೆ.

ಮಳೆಯಿಂದ ಶಾಲೆ ಗೋಡೆ ಕುಸಿತ

By

Published : Jun 8, 2019, 6:44 PM IST

ಚಿತ್ರದುರ್ಗ: ಹಿರಿಯೂರು ತಾಲೂಕಿನ ವೀರವ್ವ ನಾಗತಿಹಳ್ಳಿ ಸರ್ಕಾರಿ ಪ್ರಾಥಮಿಕ ಪಾಠ ಶಾಲೆಯಲ್ಲಿ ಮಳೆ ಬಂದು ರಾತ್ರಿ ವೇಳೆ ಶಾಲೆ ಗೋಡೆ ಕುಸಿದಿದ್ದು, ದೊಡ್ಡ ಅನಾಹುತವೊಂದು ತಪ್ಪಿದೆ.

ಮಳೆಯಿಂದ ಶಾಲೆ ಗೋಡೆ ಕುಸಿತ

ರಾತ್ರಿ ಗ್ರಾಮದಲ್ಲಿ ಸುರಿದ ಮಳೆಯಿಂದಾಗಿ ಗೋಡೆ ಕುಸಿದಿದ್ದು, 38ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇರುವ ಸರ್ಕಾರಿ ಶಾಲೆ ಇದಾಗಿದೆ. ಶಾಲೆಯ ಗೋಡೆ ಕುಸಿದಿದ್ದರಿಂದ ವಿದ್ಯಾರ್ಥಿಗಳು ಶಾಲಾ ಕಟ್ಟಡವಿಲ್ಲದೆ ಹೊರಗಡೆ ಪಾಠ ಕೇಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿ ಹಿಂದೆಯೂ ತಲೆದೋರಿದಾಗ ಶಾಲಾ ಆಡಳಿತ ಮಂಡಳಿ ಶಿಕ್ಷಣ ಇಲಾಖೆಗೆ ಪತ್ರ ಬರೆದಿದ್ದು, ಇಲಾಖೆ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎನ್ನಲಾಗಿದೆ. ಹಿರಿಯೂರು ತಾಲೂಕು ಶಿಕ್ಷಣ ಇಲಾಖೆಯಿಂದಲೂ ಪತ್ರ ಬರೆದಿದ್ದರೂ ಜಿಲ್ಲಾಡಳಿತದಿಂದ ಯಾವುದೇ ಪ್ರಯೋಜನವಾಗಿಲ್ಲ. ಇನ್ನೂ ಕ್ರಮ ಕೈಗೊಳ್ಳದ ಶಿಕ್ಷಣ ಇಲಾಖೆ ವಿರುದ್ಧ ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

For All Latest Updates

ABOUT THE AUTHOR

...view details