ಚಿತ್ರದುರ್ಗ:ಮನೆಯ ಬೀಗ ಮುರಿದ ಕಳ್ಳರು ನಗದು ಹಾಗೂ ಆಭರಣ ಕದ್ದೊಯ್ದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗದಲ್ಲಿ ಮನೆಗಳ್ಳತನ: ನಗದು, ಆಭರಣ ದೋಚಿ ಪರಾರಿ - Holalkere Taluk, T. nulenoor village
ಮನೆಯ ಬೀಗ ಮುರಿದ ಕಳ್ಳರು ನಗದು ಹಾಗೂ ಆಭರಣ ಕದ್ದೊಯ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ನಡೆದಿದೆ.
ಚಿತ್ರದುರ್ಗದಲ್ಲಿ ಮನೆಗಳ್ಳತನ: ನಗದು, ಆಭರಣ ದೋಚಿ ಪರಾರಿ
ರಂಗಪ್ಪ ಎಂಬವರ ಮನೆಯಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಸುಮಾರು 15 ಸಾವಿರ ರೂ. ನಗದು ಹಾಗೂ 30 ಸಾವಿರ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ನಡೆದಿದ್ದು, ಘಟನೆ ನಡೆದ ಮರುದಿನ ವಿಷಯ ಬೆಳಕಿಗೆ ಬಂದಿದೆ. ಇದನ್ನ ಗಮನಿಸಿದ ಮನೆ ಮಾಲೀಕ ರಂಗಪ್ಪ, ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.