ಕರ್ನಾಟಕ

karnataka

ETV Bharat / state

ಮನೆಗಳಿಗೆ ಆಕಸ್ಮಿಕ ಬೆಂಕಿ: ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಕರಕಲು - homes burned in fire

ಮನೆ ಮಾಳಿಗೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಪಕ್ಕದ ಎರಡು-ಮೂರು ಮನೆಗಳಿಗೆ ಬೆಂಕಿ ತಗುಲಿ ಮನೆಯಲ್ಲಿದ್ದ ವಸ್ತುಗಳೆಲ್ಲವೂ ಬೆಂಕಿಗಾಹುತಿಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

three homes burned in massive fire
ಮನೆಗಳಿಗೆ ಆಕಸ್ಮಿಕ ಬೆಂಕಿ

By

Published : Mar 6, 2021, 8:04 AM IST

ಚಿತ್ರದುರ್ಗ: ಮನೆಗಳಿಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ಪ್ರಮಾಣದ ಸಾಮಗ್ರಿಗಳು ಸುಟ್ಟು ಕರಕಲಾದ ಘಟನೆ ಮೊಳಕಾಲ್ಮೂರು ತಾಲೂಕಿನ ಎದಲು ಬೊಮ್ಮನಹಟ್ಟಿ ಗ್ರಾಮದಲ್ಲಿ ನಡೆದಿದೆ.

ಮನೆಗಳಿಗೆ ಆಕಸ್ಮಿಕ ಬೆಂಕಿ
ಮನೆ ಮಾಳಿಗೆಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿ ಪಕ್ಕದ ಎರಡು-ಮೂರು ಮನೆಗಳಿಗೆ ಆವರಿಸಿದೆ. ಎದಲು ಬೊಮ್ಮನಹಟ್ಟಿ ಗ್ರಾಮದ ನಾಗರಾಜ್ ಎಂಬವರ ಅಂಗಡಿ, ಲಕ್ಷ್ಮಮ್ಮ ಎಂಬವರಿಗೆ ಸೇರಿದ ಗುಡಿಸಲು, ಮಾರಣ್ಣ ಎಂಬುವವರಿಗೆ ಸೇರಿದ ಚಪ್ಪರ ಕೊಟ್ಟಿಗೆ ಸೇರಿದಂತೆ ಇನ್ನುಳಿದ ಅಕ್ಕಪಕ್ಕದ ಮನೆಗಳ ವಸ್ತುಗಳು ಸುಟ್ಟು ಕರಕಲಾಗಿವೆ ಎಂದು ಮಾಹಿತಿ ತಿಳಿದು ಬಂದಿದೆ. ಗ್ರಾಮಸ್ಥರು ಬೆಂಕಿ ನಂದಿಸುವ ಕಾರ್ಯಕ್ಕೆ ಮುಂದಾದರೂ ಅಗ್ನಿ ನಿಯಂತ್ರಣಕ್ಕೆ ಬಾರದ ಹಿನ್ನೆಲೆ, ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮನೆಗಳಿಗೆ ಆಕಸ್ಮಿಕ ಬೆಂಕಿ
ಅಗ್ನಿ ಅವಘಡದಲ್ಲಿ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ತಾಲೂಕು ಆಡಳಿತಾಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ‌‌‌. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಮನೆಗಳಿಗೆ ಆಕಸ್ಮಿಕ ಬೆಂಕಿ

ABOUT THE AUTHOR

...view details