ಚಿತ್ರದುರ್ಗ:ಆ್ಯಂಬುಲೆನ್ಸ್ ಮತ್ತು ಸ್ಕೂಟಿ ನಡುವೆ ಮುಖಾಮುಖಾ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದಲ್ಲಿ ಸಂಭವಿಸಿದೆ. ಸುದ್ದಿ ತಿಳಿದಾಕ್ಷಣವೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
ನಗರದ ಹೊರವಲಯದ ಹೊಳಲ್ಕೆರೆ ರಸ್ತೆಯ ತಿರುಮಲ ಡಾಬಾ ಬಳಿ ಶಿವಮೊಗ್ಗದ ಕಡೆಯಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಆಂಬ್ಯುಲೆನ್ಸ್ ಮತ್ತು ತ್ರಿಬಲ್ ರೈಡಿಂಗ್ನಲ್ಲಿ ಹೋಗುತ್ತಿದ್ದ ಸ್ಕೂಟಿ ನಡುವೆ ಡಿಕ್ಕಿ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕೂಟಿಯಲ್ಲಿದ್ದ ಮೂವರು ಸ್ಥಳದಲ್ಲೇ ಉಸಿರು ಚೆಲ್ಲಿದ್ದಾರೆ.