ಚಿತ್ರದುರ್ಗ:ಬೆಳ್ಳಂಬೆಳಗ್ಗೆಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಹೊಸದುರ್ಗ ತಾಲೂಕಿನ ಜೋಡಿ ಶ್ರೀರಂಗಾಪುರ ಬಳಿ ನಡೆದಿದೆ.
ಮೃತರೆಲ್ಲರು ಉಡುಪಿ ಜಿಲ್ಲೆಯ ಕುಂದಾಪುರದ ನಿವಾಸಿಗಳಾಗಿದ್ದಾರೆ. ಗೀತಾ (32), ಗೀತಾ ತಾಯಿ ಶಾರದಾ (60) ಹಾಗೂ ಗೀತಾ ಮಗಳು ಧ್ರುತಿ (5) ಮೃತಪಟ್ಟವರೆಂದು ಗುರುತಿಸಲಾಗಿದೆ. ಇನ್ನೂ ನಾಗೇಶ (65), ದಯಾನಂದ (66), ಸುಧೀಂದ್ರ (35) ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಓದಿ:ದೆಹಲಿಗೆ ತೆರಳಿದ ಸಿಎಂ: ಆಕಾಂಕ್ಷಿಗಳಲ್ಲಿ ಗರಿಗೆದರಿದ ಕುತೂಹಲ
ಒಂದೇ ಕುಟುಂಬದ ಆರು ಜನರು ಕುಂದಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಜೋಡಿ ಶ್ರೀರಂಗಾಪುರದ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಕೂಡಲೇ ಸ್ಥಳೀಯರು ಸ್ಥಳಕ್ಕೆ ದೌಡಾಯಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರು. ಆದ್ರೆ ಗೀತಾ, ಗೀತಾ ಮಗಳು ಮತ್ತು ತಾಯಿ ಆಸ್ಪತ್ರೆ ಮಾರ್ಗ ಮಧ್ಯೆದಲ್ಲಿ ಮೃತಪಟ್ಟಿದ್ದಾರೆ. ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು.
ಚಿತ್ರದುರ್ಗದಲ್ಲಿ ಕಾರು ಅಪಘಾತ ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಅಪಘಾತ ಸಂಭವಿಸಿರಬಹುದು ಎಂದು ಹೊಸದುರ್ಗ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಘಟನೆ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.