ಚಿತ್ರದುರ್ಗ: ನಗರದ ಪ್ರವಾಸಿ ಮಂದಿರದ ಮುಂಭಾಗದಲ್ಲಿ ಸೋಮವಾರ ಮಧ್ಯರಾತ್ರಿ ಸುಮಾರು 12 ಗಂಟೆಯ ಸಮಯದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಗಾಂಧಿ ವೃತ್ತದ ಕಡೆಗೆ ಹೋಗುವಾಗ ವೇಗವಾಗಿ ಬಂದ ಕಾರೊಂದು ಪ್ರವಾಸಿ ಮಂದಿರದ ಮುಂಭಾಗದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರು ಚಾಲಕ ಮನು ಸೇರಿದಂತೆ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಒಟ್ಟು ಆರು ಮಂದಿ ಪ್ರಯಾಣಿಸುತ್ತಿದ್ದರು. ದೀಪಾವಳಿ ಹಬ್ಬದಂದೇ ಮೂವರು ಮೃತಪಟ್ಟಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.