ಚಿತ್ರದುರ್ಗ :ಮೂವರು ಯುವಕರು ಕುಳಿತಿದ್ದ ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಓಬ್ಬ ಯುವಕನ ಕಾಲುಗಳೇ ತುಂಡಾಗಿರುವ ಘಟನೆ ಜಿಲ್ಲೆಯ ಹೊಸದುರ್ಗ ತಾಲೂಕಿನ ಗೊರವಿಗೊಂಡನಹಳ್ಳಿ ಬಳಿ ನಡೆದಿದೆ.
ಅಪರಿಚಿತ ವಾಹನ ಬೈಕ್‌ಗೆ ಡಿಕ್ಕಿ ಹೊಡೆದ ರಬಸಕ್ಕೆ ಬೈಕ್‌ನಲ್ಲಿದ್ದ ಮೂವರೂ ಯುವಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. ಅದರಲ್ಲೂ ಪ್ರಜ್ವಲ್( 21) ಎಂಬ ಯುವಕನ ಕಾಲುಗಳೇ ತುಂಡಾಗಿವೆ.
ರಾಘು(21), ಶ್ರೀನಿವಾಸ(21) ಎಂಬ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಶಿವಮೊಗ್ಗ ನಗರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಯುವಕರು ಹೊಸದುರ್ಗದಿಂದ ಕೆಲ್ಲೋಡಿಗೆ ತೆರಳುತ್ತಿದ್ದರು ಎನ್ನಲಾಗುತ್ತಿದೆ.
ಬೈಕ್‌ಗೆ ಡಿಕ್ಕಿ ಹೊಡೆಯುತ್ತಿದಂತೆ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳು ಕೆಲ್ಲೋಡು ಗ್ರಾಮದವರಾಗಿದ್ದು, ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.