ಕರ್ನಾಟಕ

karnataka

ETV Bharat / state

ತಂಬಾಕು ಉತ್ಪನ್ನ ಮಾರಾಟ ನಿಷೇಧ :  53 ಪ್ರಕರಣ ದಾಖಲು - Chitradurga news

ಜಿಲ್ಲಾದ್ಯಂತ ತಂಬಾಕು ಹಾಗೂ ಪಾನ್‍ಮಸಾಲ, ಜರ್ದಾ, ಖೈನಿ ಉತ್ಪನ್ನಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Chitradurga
ತಂಬಾಕು ಉತ್ಪನ್ನ ಮಾರಾಟ ನಿಷೇಧ : ಉಲ್ಲಂಘನೆಯ 53 ಪ್ರಕರಣ ದಾಖಲು

By

Published : Apr 21, 2020, 5:01 PM IST

ಚಿತ್ರದುರ್ಗ: ತಂಬಾಕು ಉತ್ಪನ್ನ ಮಾರಾಟಕ್ಕೆ ನಿಷೇಧ ಜಾರಿಗೊಳಿಸಿದ್ದು, ಈ ಆದೇಶ ಉಲ್ಲಂಘನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ನಗರದಲ್ಲಿ ವಿವಿಧ ಅಂಗಡಿಗಳ ಮೇಲೆ ಅಧಿಕಾರಿಗಳ ತಂಡವು ದಾಳಿ ನಡೆಸಿ, 53 ಪ್ರಕರಣಗಳನ್ನು ದಾಖಲಿಸಿಕೊಂಡು ದಂಡ ವಿಧಿಸಿದೆ.

ಕೋವಿಡ್ ಸೋಂಕು ಹರಡದಂತೆ ಎಚ್ಚರ ವಹಿಸಲು ಈಗಾಗಲೇ ಜಿಲ್ಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದನ್ನು ನಿಷೇಧಿಸಿದ್ದು, ಉಲ್ಲಂಘಿಸುವವರ ವಿರುದ್ಧ ಗರಿಷ್ಠ 1 ಸಾವಿರ ರೂ. ದಂಡ ವಿಧಿಸಲು ಆದೇಶಿಸಲಾಗಿದೆ.

ಅಲ್ಲದೇ ಜಿಲ್ಲಾದ್ಯಂತ ತಂಬಾಕು ಹಾಗೂ ಪಾನ್‍ಮಸಾಲ, ಜರ್ದಾ, ಖೈನಿ ಉತ್ಪನ್ನಗಳ ಮಾರಾಟ ಹಾಗೂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಆದೇಶ ಜಾರಿ ಪರಿಶೀಲನೆ ಸಂಬಂಧ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾಯ್ದೆ ಅನುಷ್ಠಾನ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳನ್ನು ಒಳಗೊಂಡ ತಂಡ ಚಿತ್ರದುರ್ಗ ನಗರದ ವಿವಿಧ ಅಂಗಡಿಗಳ ಮೇಲೆ ಸೋಮವಾರ ದಾಳಿ ನಡೆಸಿದ್ದು, ಆದೇಶ ಉಲ್ಲಂಘಿಸಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿರುವುದು ಕಂಡು ಬಂದಿದೆ.

ಹೀಗಾಗಿ ಆದೇಶ ಉಲ್ಲಂಘಿಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 53 ಪ್ರಕರಣ ದಾಖಲಿಸಿ, ಒಟ್ಟು 8,300 ರೂ. ದಂಡ ವಿಧಿಸಲಾಗಿದೆ.

For All Latest Updates

ABOUT THE AUTHOR

...view details