ಚಿತ್ರದುರ್ಗ :ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಹಿನ್ನೆಲ್ಲೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನಿಂದ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀಗಳಿಗೆ ಆಹ್ವಾನಿಸಲಾಗಿದೆ.
ರಾಮ ಮಂದಿರ ಭೂಮಿ ಪೂಜೆಗೆ ಮಾದಾರ ಚೆನ್ನಯ್ಯ ಶ್ರೀಗೆ ಆಹ್ವಾನ - ram mandira bhumi puje
ಅಯೋಧ್ಯೆಯ ರಾಮ ಮಂದಿರ ಭೂಮಿ ಪೂಜೆಗೆ ಚಿತ್ರದುರ್ಗದ ಬಸವಮೂರ್ತಿ ಮಾದಾರ ಚನ್ನಯ್ಯಶ್ರೀಗಳಿಗೆ ಆಹ್ವಾನ ನೀಡಲಾಗಿದ್ದು, ಇಂದು ಸಂಜೆ ಶ್ರೀಗಳು ತೆರಳಲಿದ್ದಾರೆ..

ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ
ಬಸವಮೂರ್ತಿ ಮಾದಾರ ಚನ್ನಯ್ಯಶ್ರೀ
ಈ ಸಂಬಂಧ ಇಂದು ಅಯೋಧ್ಯೆಗೆ ತೆರಳಲಿದ್ದಾರೆ. ಐತಿಹಾಸಿಕ ಕಾರ್ಯಕ್ರಮಕ್ಕೆ ನಮ್ಮನ್ನು ಆಹ್ವಾನಿಸಿದ್ದು, ಸಂತೋಷವಾಗಿದೆ. ಅಯೋಧ್ಯೆಗೆ ತೆರಳಲು ಸಿದ್ಧತೆ ಮಾಡಿಕೊಂಡಿದ್ದೇವೆ. ರಾಮ ಮಂದಿರ ನಿರ್ಮಾಣ ಸಮಸ್ತ ಭಾರತೀಯರ ಭಾವನೆಗಳ ಪ್ರತೀಕವಾಗಿದೆ ಎಂದು ಶ್ರೀಗಳು ಹೇಳಿದರು.
ರಾಮಮಂದಿರ ನಿರ್ಮಾಣಕ್ಕೆ ಸಾಕ್ಷೀಕರಿಸಲು ಅವಕಾಶ ಸಿಕ್ಕಿದೆ. ಈ ಸುವರ್ಣ ಸಮಯಕ್ಕೆ ದೇಶದ ಜನ ಕಾತುರರಾಗಿದ್ದಾರೆ. ರಾಮಮಂದಿರ ನಿರ್ಮಾಣ ಕಾರ್ಯ ಯಶಸ್ವಿ ಆಗಲಿ. ಈ ದೇಶದಲ್ಲಿ ನಂಬಿಕೆಗಳ ಆಧಾರದ ಮೇಲೆ ಆಚರಣೆಗಳು ನಡೆಯುತ್ತವೆ. ಅಯೋಧ್ಯೆ ಅಂದರೆ ನಂಬಿಕೆಗಳ ಕರ್ಮಭೂಮಿ ಎಂಬ ಭಾವನೆ ಇದೆ ಎಂದರು.