ಚಿತ್ರದುರ್ಗ:ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ.
ಚಿತ್ರದುರ್ಗದಲ್ಲಿ ಪ್ರತ್ಯೇಕ ಅಪಘಾತ: ಇಬ್ಬರು ಸಾವು - ಚಳ್ಳಕೆರೆ ಪೊಲೀಸ್ ಠಾಣೆ
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರ ಹಾಗೂ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ರೈಲ್ವೆ ನಿಲ್ದಾಣ ಬಳಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನಪ್ಪಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಬಳ್ಳಾರಿ ರಸ್ತೆಯಲ್ಲಿ ನಡೆದಿದೆ. ಚಳ್ಳಕೆರೆ ನಿವಾಸಿ ಬೈಕ್ ಸವಾರ ತಿರುಮಲೇಶ್ (24) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನು ನೀರು ಸರಬರಾಜು ಮಾಡುವ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕ ಸಾವನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆ ಗ್ರಾಮದ ರೈಲ್ವೆ ನಿಲ್ದಾಣ ಬಳಿ ನಡೆದಿದೆ. ನೀರು ಸರಬರಾಜು ಮಾಡಿ ಹಿಂದಿರುಗುವಾಗ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮೊಗಳಹಳ್ಳಿಯ ನಿವಾಸಿ ಹನುಮಂತರೆಡ್ಡಿ (38) ಸಾವನಪ್ಪಿದ್ದಾನೆ. ಈ ಬಗ್ಗೆ ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.