ಚಿತ್ರದುರ್ಗ: ಕಾರ್ವೊಂದು ರಸ್ತೆಯ ತಡೆಗೋಡೆಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಆನೆಸಿದ್ರಿ ಗ್ರಾಮದ ಬಳಿ ಘಟನೆ ನಡೆದಿದೆ.
ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ನಾಲ್ವರು ಮಕ್ಕಳು ಸೇರಿದಂತೆ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.