ಕರ್ನಾಟಕ

karnataka

ETV Bharat / state

ಪಾದಚಾರಿಗೆ ಬೈಕ್​ ಡಿಕ್ಕಿ : ಇಬ್ಬರು ಸ್ಥಳದಲ್ಲೇ ಸಾವು - ಇಬ್ಬರು ಸ್ಥಳದಲ್ಲೇ ಸಾವು

ಪಾದಚಾರಿಗೆ ವೇಗವಾಗಿ ಬಂದ ಬೈಕ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಹಾಗೂ ಬೈಕ್ ಸವಾರ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮೊಳಕಾಲ್ಮೂರು ತಾಲೂಕಿನ ರಾಯಪುರ ರಾಷ್ಟ್ರೀಯ ಹೆದ್ದಾರಿ 150 ಎ ಬಳಿ ನಡೆದಿದೆ.

road accident
ರಸ್ತೆ ಅಪಘಾತ

By

Published : Mar 13, 2021, 9:40 AM IST

ಚಿತ್ರದುರ್ಗ: ಓರ್ವ ಪಾದಚಾರಿಗೆ ವೇಗವಾಗಿ ಬಂದ ಬೈಕ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಪಾದಚಾರಿ ಹಾಗೂ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮೊಳಕಾಲ್ಮೂರು ತಾಲೂಕಿನ ರಾಯಪುರ ರಾಷ್ಟ್ರೀಯ ಹೆದ್ದಾರಿ 150 ಎ ಬಳಿ ನಡೆದಿದೆ.

ವೇಗವಾಗಿ ಬಂದ ಬುಲೆಟ್ ಬೈಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ದಾಸರ ಮುತ್ತಯ್ಯ (60) ಎಂಬುವರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಕೆಳಗೆ ಬಿದ್ದ ಪರಿಣಾಮ ಬೈಕ್ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಬೈಕ್ ಸವಾರ ಪವನ್ ಕುಮಾರ್ (25) ಕೂಡಾ ಅಸುನೀಗಿದ್ದಾನೆ. ಬೈಕ್​ನಲ್ಲಿದ್ದ ಇನ್ನೋರ್ವ ವ್ಯಕ್ತಿ ಉದಯಕುಮಾರ್​ಗೆ ಗಂಭೀರ ಗಾಯವಾಗಿದ್ದು, ಮೊಳಕಾಲ್ಮೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಬೆಂಗಳೂರಿನಿಂದ ಬಳ್ಳಾರಿ ಕಡೆಗೆ ಯುವಕರು ಬೈಕ್ ಮೂಲಕ ತೆರಳುತ್ತಿದ್ದರು ಎನ್ನಲಾಗುತ್ತಿದೆ. ಬೈಕ್ ಸವಾರನ ವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಶ್ರೀಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಓದಿ : ಪೌರ ಕಾರ್ಮಿಕನ ಮೇಲೆ ಅಂಗಡಿ ಮಾಲೀಕನಿಂದ ಹಲ್ಲೆ! ವಿಡಿಯೋ...

ABOUT THE AUTHOR

...view details