ಚಿತ್ರದುರ್ಗ:ಟ್ಯಾಂಕರ್ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದ ಸಮೀಪ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇಂದು ಸಂಭವಿಸಿದೆ. ಮೃತಪಟ್ಟ ಮಹಿಳೆಯರನ್ನು ಬೆಂಗಳೂರಿನ ನಿರ್ಮಲಾ(55), ವಿನುತಾ(40) ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಫಣಿರಾಜ್(36), ರಶ್ಮಿ(32) ಮತ್ತು ಯಶಸ್(2) ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿಂದ ಹೊಸಪೇಟೆಗೆ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ: ಟ್ಯಾಂಕರ್ ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಹಿಳೆಯರು ಸಾವು - ಚಿತ್ರದುರ್ಗ ಅಪಘಾತ
ಬೆಂಗಳೂರಿನಿಂದ ಹೊಸಪೇಟೆಗೆ ಕಾರಲ್ಲಿ ತೆರಳುತ್ತಿದ್ದಾಗ ಟ್ಯಾಂಕರ್ ಲಾರಿಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ರಸ್ತೆ ಅಪಘಾತ
Published : Jan 19, 2024, 11:36 AM IST
|Updated : Jan 19, 2024, 12:23 PM IST
Last Updated : Jan 19, 2024, 12:23 PM IST