ಕರ್ನಾಟಕ

karnataka

ETV Bharat / state

ಡಿವೈಡರ್​ಗೆ ಕಾರು ಡಿಕ್ಕಿ: ಚಿತ್ರದುರ್ಗದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವು

ಕಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಅವಘಡ. ಡಿವೈಡರ್​ಗೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸಾವು. ಚಿತ್ರದುರ್ಗ ಜಿಲ್ಲೆಯ ಚಿಕ್ಕಬೆನ್ನೂರು ಸಮೀಪ ಘಟನೆ.

car crashes into road divider in Chitradurga
ಡಿವೈಡರ್​ಗೆ ಡಿಕ್ಕಿಯಾದ ಕಾರು

By

Published : Nov 8, 2022, 10:12 AM IST

ಚಿತ್ರದುರ್ಗ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರ ಗಾಯವಾಗಿದೆ. ಚಿತ್ರದುರ್ಗ ಜಿಲ್ಲೆಯ ಚಿಕ್ಕಬೆನ್ನೂರು ಸಮೀಪ ಈ ದುರ್ಘಟನೆ ನಡೆಯಿತು.

ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್‌ಬಾರ್ವಿ (44) ಮೃತರು. ಕಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ತಿರುಪತಿ ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವಾಗ ಅವಘಡ ನಡೆದಿದೆ. ಗಾಯಾಳು ಸಚ್ಚಿನ್ ಬಾರ್ವಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು: ನಾಲ್ವರ ದುರ್ಮರಣ

ABOUT THE AUTHOR

...view details