ಚಿತ್ರದುರ್ಗ:ಅಂತರ್ಜಲ ಚೇತನ ಯೋಜನೆಯಡಿ ಜಿಲ್ಲೆಯ ಜಲಮೂಲಗಳ ಸಂರಕ್ಷಣೆ ಹಾಗೂ ಜಲಚಕ್ರ ವ್ಯವಸ್ಥೆ ಸುಧಾರಣೆಗಾಗಿ 270 ಕೋಟಿ ರೂ.ವೆಚ್ಚದಲ್ಲಿ ಸುಮಾರು 46 ಸಾವಿರ ಕಾಮಗಾರಿಗಳು ಶೀಘ್ರವೇ ಆರಂಭ ಆಗಲಿವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ಅಂತರ್ಜಲ ಚೇತನ ಯೋಜನೆಯಡಿ ಕಾಮಗಾರಿಗಳು ಶೀಘ್ರವೇ ಆರಂಭ: ಶಾಸಕರ ಭರವಸೆ - ಆರ್ಟ್ ಆಫ್ ಲಿವಿಂಗ್ ಸಂಸ್ಥೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಜಾರಿಗೊಳಿಸಿರುವ ಅಂತರ್ಜಲ ಚೇತನ ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಜಲಮೂಲಗಳ ಸಂರಕ್ಷಣೆ ಹಾಗೂ ಜಲಚಕ್ರ ವ್ಯವಸ್ಥೆ ಸುಧಾರಣೆಗಾಗಿ 270 ಕೋಟಿ ರೂ. ವೆಚ್ಚದಲ್ಲಿ ಸುಮಾರು 46 ಸಾವಿರ ಕಾಮಗಾರಿಗಳು ಆರಂಭ ಆಗಲಿವೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಅಂತರ್ಜಲ ಚೇತನ’ ಯೋಜನೆ ಕುರಿತು ಪಿಡಿಒ ಹಾಗೂ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಸಭೆಯಲ್ಲಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯು ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ನೆರವಿನೊಂದಿಗೆ ಜಲಮೂಲಗಳ ಸಂರಕ್ಷಣೆ ಹಾಗೂ ಅಂತರ್ಜಲ ವೃದ್ಧಿಗಾಗಿ ‘ಅಂತರ್ಜಲ ಚೇತನ’ ಯೋಜನೆಯನ್ನ ಚಿತ್ರದುರ್ಗ ಜಿಲ್ಲೆಯೂ ಸೇರಿದಂತೆ ರಾಜ್ಯದ 9 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಕೈಗೆತ್ತಿಕೊಂಡಿದ್ದು,ಅಂತರ್ಜಲ ಮಟ್ಟ ಸುಧಾರಣೆಗಾಗಿ ಸಾಕಷ್ಟು ತಜ್ಞರು ಅಧ್ಯಯನ ನಡೆಸಿ ವರದಿ ನೀಡಿದ್ದಾರೆ.
ಹೀಗಾಗಿ, ಜಿಲ್ಲೆಯ ಪಾಲಿಗೆ ಈ ಯೋಜನೆ ವರದಾನವಾಗಲಿದೆ. ಈ ವರ್ಷ ಜಿಲ್ಲೆಯಲ್ಲಿ 270 ಕೋಟಿ ರೂ. ವೆಚ್ಚದಲ್ಲಿ ಜಲಸಂರಕ್ಷಣೆಗೆ ಸಂಬಂಧಿಸಿದ ಸುಮಾರು 46 ಸಾವಿರ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.