ಚಿತ್ರದುರ್ಗ: ಜಿಲ್ಲೆಯಲ್ಲಿ ಚಿರತೆ ಸಂತತಿ ಹೆಚ್ಚಾಗಿದ್ದು, ಆಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಲಗ್ಗೆ ಇಡುವುದು ಸಾಮಾನ್ಯವಾಗಿದೆ. ಆದರೆ ಹೀಗೆ ಆಹಾರಕ್ಕಾಗಿ ನಾಡಿಗೆ ಬಂದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಸಾವನ್ನಪ್ಪಿದೆ.
ಆಹಾರ ಅರಸಿ ನಾಡಿಗೆ ಬಂದ ಚಿರತೆಗೆ ಅಪರಿಚಿತ ವಾಹನ ಡಿಕ್ಕಿ: ಸ್ಥಳದಲ್ಲೇ ಮೃತಪಟ್ಟ ಚೀತಾ - ಚಿತ್ರದುರ್ಗ ಚಿರತೆ ಸಂಬಂಧಿತ ಸುದ್ದಿ 2020
ಹಾರ ಅರಸಿಕೊಂಡು ಕಾಡಿನಿಂದ ನಾಡಿಗೆ ಬಂದ ಚಿರತೆ ರಸ್ತೆ ಅಪಘಾತಕ್ಕೆ ಸಿಲುಕಿ ಸಾವನ್ನಪ್ಪಿದೆ. ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಚಿರತೆಗೆ ಅಪರಿಚಿತ ವಾಹನ ಡಿಕ್ಕಿ
ಚಿತ್ರದುರ್ಗ ತಾಲೂಕಿನ ಗುಡ್ಡದರಂಗವ್ವನಹಳ್ಳಿ ಗ್ರಾಮದ ಬಳಿ ತಡರಾತ್ರಿ ಘಟನೆ ನಡೆದಿದೆ. ಸುಮಾರು 8 ತಿಂಗಳ ಹೆಣ್ಣು ಚಿರತೆ ಇದಾಗಿದೆ ಎಂದು ಅಂದಾಜಿಸಲಾಗಿದೆ.
ಸದ್ಯ ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.