ಚಿತ್ರದುರ್ಗ: ಯೂರಿಯಾ ಗೊಬ್ಬರದ ಬೇಡಿಕೆ ಹೆಚ್ಚಾಗಿದ್ದು, ಕಾಳಸಂತೆಯಲ್ಲಿ ಅಧಿಕ ದರದಲ್ಲಿ ಮಾರಾಟವಾಗದಂತೆ ಕೃಷಿ ಇಲಾಖೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಿಶಕಲಾ ಸುರೇಶ್‍ಬಾಬು ತಿಳಿಸಿದರು.
ಸರ್ಕಾರ ನಿಗದಿ ಮಾಡಿದ ದರದಲ್ಲಿ ರೈತರಿಗೆ ಯೂರಿಯಾ ಲಭಿಸಬೇಕು: ಶಶಿಕಲಾ ಸುರೇಶ್‍ಬಾಬು
ರೈತರು ಅಧಿಕ ದರದಲ್ಲಿ ಖರೀದಿಸಿ ಬೆಳೆಗಳಿಗೆ ಗೊಬ್ಬರ ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಇದಕ್ಕೆ ಕಡಿವಾಣ ಹಾಕಿ, ಸರ್ಕಾರ ನಿಗದಿ ಮಾಡಿರುವ ದರದಲ್ಲಿ ಯೂರಿಯಾ ಗೊಬ್ಬರ ಸಿಗುವಂತೆ ನೋಡಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್‍ಬಾಬು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜುಲೈ ಅಂತ್ಯದ ಮಾಸಿಕ ಕೆ.ಡಿ.ಪಿ. ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಸ್ತುತ ಯೂರಿಯಾ ರಸಗೊಬ್ಬರಕ್ಕೆ ಬೇಡಿಕೆ ಹೆಚ್ಚಾಗಿದೆ. ಅನೇಕ ರೈತರು ಅಧಿಕ ದರದಲ್ಲಿ ಖರೀದಿಸಿ ಬೆಳೆಗಳಿಗೆ ಗೊಬ್ಬರ ಹಾಕುವಂತಹ ಸ್ಥಿತಿ ನಿರ್ಮಾಣವಾಗಿದೆ. ಆಯಾ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಇದಕ್ಕೆ ಕಡಿವಾಣ ಹಾಕಿ, ಸರ್ಕಾರ ನಿಗದಿ ಮಾಡಿರುವ ದರದಲ್ಲಿ ಯೂರಿಯಾ ಗೊಬ್ಬರ ಸಿಗುವಂತೆ ನೋಡಿಕೊಳ್ಳಬೇಕೆಂದು ಸೂಚನೆ ನೀಡಿದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿದ್ದರೂ ಸಹ ನಿಮ್ಮ ಕೆಳಗಿನ ಹಂತದ ಅನುಷ್ಠಾನಾಧಿಕಾರಿಗಳು ಸಕಾಲಕ್ಕೆ ಜನರಿಗೆ ಗೊಬ್ಬರ, ಸೌಲಭ್ಯ ತಲುಪಿಸುವ ಕೆಲಸ ಮಾಡುತ್ತಿಲ್ಲ. ಹೀಗಾಗಿ ನೀವು ಜವಾಬ್ದಾರರಾಗಿದ್ದು ನಿಮಗಿರುವ ಅಧಿಕಾರ ಚಲಾಯಿಸಿ ಕೆಳಗಿನ ಹಂತದ ಸಿಬ್ಬಂದಿಯಿಂದ ಕೆಲಸ ಮಾಡಿಸಬೇಕೆಂದು ಸೂಚನೆ ನೀಡಿದರು.