ಕರ್ನಾಟಕ

karnataka

ETV Bharat / state

ಚಿತ್ರದುರ್ಗ; ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವ್ಯಾಕ್ಸಿನ್​ಗೆ ಚಾಲನೆ

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೂ ತೋರಣಗಳಿಂದ ವಿಶೇಷವಾಗಿ ಸಿಂಗರಿಸಲಾಗಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಸಾಲುಗಟ್ಟಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ. ಹಿರಿಯೂರು ತಾಲೂಕಿನ ಐಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು 60 ಮಂದಿಗೆ ಲಸಿಕೆ ನೀಡಲಾಗುತ್ತಿದೆ.

By

Published : Jan 18, 2021, 4:54 PM IST

ಆರೋಗ್ಯ ಕೇಂದ್ರ
ಆರೋಗ್ಯ ಕೇಂದ್ರ

ಚಿತ್ರದುರ್ಗ: ಇಂದಿನಿಂದ ಕೊರೊನಾ ವಾರಿಯರ್ಸ್​ಗೆ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಚಾಲನೆ ನೀಡಲಾಗಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಹೂ ತೋರಣಗಳಿಂದ ವಿಶೇಷವಾಗಿ ಸಿಂಗರಿಸಲಾಗಿದ್ದು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು ಸಾಲುಗಟ್ಟಿ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಿದ್ದಾರೆ. ಹಿರಿಯೂರು ತಾಲೂಕಿನ ಐಮಂಗಲದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು 60 ಮಂದಿಗೆ ಲಸಿಕೆ ನೀಡಲಾಗುತ್ತಿದೆ.

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಕೋ-ವ್ಯಾಕ್ಸಿನ್​ಗೆ ಚಾಲನೆ

ಜಿಲ್ಲೆಯಾದ್ಯಂತ 93 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಒಟ್ಟು 6,396 ಕೊರೊನಾ ವಾರಿಯರ್ಸ್​ಗೆ ಲಸಿಕೆ ನೀಡಲಾಗುತ್ತಿದೆ. ಸರ್ಕಾರ ನಿಗದಿ ಪಡಿಸಿದಂತೆ (ಶನಿವಾರ) ಪ್ರಥಮ ದಿನದಂದು ಒಟ್ಟು ಜಿಲ್ಲೆಯ 8 ಕೇಂದ್ರಗಳಲ್ಲಿ 800 ಜನಕ್ಕೆೆ ಲಸಿಕೆ ನೀಡುವ ಉದ್ದೇಶ ಹೊಂದಲಾಗಿತ್ತು. ಈ ಪೈಕಿ 464 ಜನರಿಗೆ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ABOUT THE AUTHOR

...view details