ಕರ್ನಾಟಕ

karnataka

ETV Bharat / state

ಚಿತ್ರದುರ್ಗ: ನಾಪತ್ತೆ ಆಗಿದ್ದ ಗ್ರಾಮ ಲೆಕ್ಕಾಧಿಕಾರಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ - Village accountant suicide

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದಲ್ಲಿ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ನಡೆದರೆ, ನೆಹರು ನಗರ ಬಡಾವಣೆಯಲ್ಲಿ ಗೃಹಿಣಿಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.

Village accountant committed suicide in Chitradurga
ನಾಪತ್ತೆ ಆಗಿದ್ದ ಗ್ರಾಮ ಲೆಕ್ಕಾಧಿಕಾರಿ

By ETV Bharat Karnataka Team

Published : Jan 12, 2024, 4:16 PM IST

ಚಿತ್ರದುರ್ಗ:ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ದುರ್ಗಾವರ ಗ್ರಾಮದಲ್ಲಿ ನಡೆದಿದೆ. ಕೆಳಗೋಟೆ ಬಡಾವಣೆಯ ನಾಗರಾಜ್ (45) ಆತ್ಮಹತ್ಯೆ ಮಾಡಿಕೊಂಡ ಗ್ರಾಮ ಲೆಕ್ಕಾಧಿಕಾರಿ. ನಾಗರಾಜ್ ಅವರು ಚಳ್ಳಕೆರೆ ಪಟ್ಟಣದಿಂದ ಜನವರಿ 3 ರಂದು ನಾಪತ್ತೆ ಆಗಿದ್ದರು.

ಈ ಬಗ್ಗೆ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ಕೂಡ ದಾಖಲಾಗಿತ್ತು. ಆದರೆ, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಇಂದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದರು. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸುಮಾರು ನಾಲ್ಕೈದು ದಿನಗಳ ಹಿಂದೆಯೇ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸದ್ಯಕ್ಕೆ ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ.

ಮತ್ತೊಂದು ಪ್ರಕರಣ: ಗೃಹಿಣಿಯೊಬ್ಬಳನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ನೆಹರು ನಗರ ಬಡಾವಣೆಯಲ್ಲಿ ನಡೆದಿದೆ. ರೇಣುಕಾ (40) ಮೃತ ದುರ್ದೈವಿ. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಠಾಣಾ ಪೊಲೀಸರು ಪರಿಶೀಲನೆ ನಡೆಸಿದರು. ಪತಿ ಮಂಜುನಾಥನ ಮೇಲೆ ಅನುಮಾನ ವ್ಯಕ್ತವಾಗಿದ್ದರಿಂದ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಪ್ರಕರಣ ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ.

ಇದನ್ನೂ ಓದಿ:ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ ಐವರ ಅಸ್ಥಿಪಂಜರಗಳು ಪತ್ತೆ, ಬೆಚ್ಚಿಬಿದ್ದ ಜನತೆ

ABOUT THE AUTHOR

...view details