ಚಿತ್ರದುರ್ಗ: ನರೇಗಾ ಕಾಮಗಾರಿ ಅಕ್ರಮ ಪ್ರಶ್ನಿಸಿದ್ದಕ್ಕೆ ಜನರಿಗೆ ಹಲ್ಲೆ ನಡೆಸಿದ ಆರೋಪ ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾ.ಪಂ ವ್ಯಾಪ್ತಿಯ ಬಂಜಿಗೆರೆ ಗ್ರಾಮದಲ್ಲಿ ಕೇಳಿ ಬಂದಿದೆ.
ಕಾರ್ಮಿಕರನ್ನು ಬಳಸಿಕೊಳ್ಳದೆ ಜೆಸಿಬಿ ಮೂಲಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಕೆಲವು ಗ್ರಾಮಸ್ಥರು ಪ್ರಶ್ನೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ಕಾಮಗಾರಿ ವಿಚಾರವಾಗಿ ಮಧ್ಯವರ್ತಿಗಳ ಹಾಗೂ ಗ್ರಾಮಸ್ಥರ ವಾಗ್ವಾದಕ್ಕೆ ಕಾರಣವಾಗಿದೆ. ಮಾತಿನ ಚಕಮಕಿ ಅತಿರೇಕಕ್ಕೇರಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ ಎಂದು ಮಾಹಿತಿ ತಿಳಿದು ಬಂದಿದೆ.
ನರೇಗಾ ಕಾಮಗಾರಿ ಅಕ್ರಮ ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ಮಧ್ಯವರ್ತಿಗಳಿಂದ ಥಳಿತ?
ಚಳ್ಳಕೆರೆ ತಾಲೂಕಿನ ಬೇಡರೆಡ್ಡಿಹಳ್ಳಿ ಗ್ರಾ.ಪಂ ವ್ಯಾಪ್ತಿಯ ಬಂಜಿಗೆರೆ ಗ್ರಾಮದಲ್ಲಿ ನರೇಗಾ ಕಾಮಗಾರಿ ವೇಳೆ ಕಾರ್ಮಿಕರನ್ನು ಬಳಸಿಕೊಳ್ಳದೆ ಜೆಸಿಬಿ ಮೂಲಕ ಕಾಮಗಾರಿ ನಡೆಸಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಕೇಳಿ ಬಂದಿದೆ.
ನರೇಗಾ ಕಾಮಗಾರಿ
ಕೂಲಿ ಕಾರ್ಮಿಕರನ್ನು ಬಳಸಿಕೊಳ್ಳದೆ ಜೆಸಿಬಿಯಲ್ಲಿ ಕೆಲಸ ಮಾಡಿಸುತ್ತಿರುವ ಅಕ್ರಮದ ವಿಡಿಯೋ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಹಿಗ್ಗಾಮುಗ್ಗ ಥಳಿಸಲಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ:ಪ್ರತಿ ಪಂಚಾಯತ್ನಲ್ಲಿಯೂ ಒಂದು ಪಬ್ಲಿಕ್ ಶಾಲೆ ತೆರೆಯಬೇಕು : ಶಾಸಕ ಶಿವಲಿಂಗೇಗೌಡ