ಕರ್ನಾಟಕ

karnataka

ETV Bharat / state

ಮತದಾನ ಎಲ್ಲರ ಹಕ್ಕು ಮತ್ತು ಕರ್ತವ್ಯ: ಡಿಸಿ ವಿನೋತ್ ಪ್ರಿಯಾ - undefined

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು ಆಯೋಜಿಸಿದ್ದ ಸ್ವೀಪ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ ವಿನೋತ್ ಪ್ರಿಯಾ, ಮತ ಚಲಾವಣೆಯ ಮಹತ್ವಗಳ ಕುರಿತು ಮಾತನಾಡಿದರು.

ಮಾನವ ಸರಪಳಿ ಹಾಗೂ ರಂಗೋಲಿ ಪ್ರದರ್ಶನ

By

Published : Mar 16, 2019, 9:26 PM IST

ಚಿತ್ರದುರ್ಗ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಪ್ರಜೆಗಳು ಮತದಾನ ಮಾಡಬೇಕು. ಆ ಮೂಲಕ ತಮ್ಮ ಕರ್ತವ್ಯ ನಿಭಾಯಿಸಬೇಕು. ಆಗ ಮಾತ್ರ ಚುನಾವಣೆ ಮಹತ್ವ ಪಡೆದುಕೊಳ್ಳುತ್ತದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಹೇಳಿದರು.

ನಗರದ ಕೋಟೆ ಪ್ರವೇಶ ಆವರಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹಾಸ್ಟೆಲ್ ವಿದ್ಯಾರ್ಥಿಗಳು ಸ್ವೀಪ್ ಕಾರ್ಯಕ್ರಮ ಆಯೋಜಿಸಿದ್ದರು. ಈ ವೇಳೆ ಮತದಾನ ಜಾಗೃತಿಗಾಗಿ ಏರ್ಪಡಿಸಿದ್ದ ಮಾನವ ಸರಪಳಿ ಹಾಗೂ ರಂಗೋಲಿ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವನ್ನು ನಮ್ಮ ಸಂವಿಧಾನ ಪ್ರಜೆಗಳಿಗೆ ನೀಡಿದ್ದು, ಅದನ್ನು ಸದುಪಯೋಗ ಪಡಿಸಬೇಕು. ಏಪ್ರಿಲ್ 18ರಂದು ಲೋಕಸಭೆ ಚುನಾವಣೆಗೆ ಮತದಾನ ನಡೆಯಲಿದ್ದು, ಎಲ್ಲ ಮತದಾರರು ಮತಗಟ್ಟೆಗೆ ಬಂದು ತಮ್ಮ ಅಮೂಲ್ಯ ಮತವನ್ನು ಚಲಾಯಿಸುವಂತಾಗಬೇಕು. ಶೇ. 100 ರಷ್ಟು ಮತದಾರರು ತಮ್ಮ ಮತ ಚಲಾಯಿಸಿದಾಗ ಮಾತ್ರ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಿಜವಾದ ಅರ್ಥ ಬರುತ್ತದೆ ಎಂದರು.

For All Latest Updates

TAGGED:

ABOUT THE AUTHOR

...view details