ಚಿತ್ರದುರ್ಗ :ಜಿಲ್ಲೆಯ ಹಂಪಯ್ಯನ ಮಾಳಿಗೆ ಗ್ರಾಮದ ಪುಪ್ಪಾ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಾಗ ಪತಿ ದಯಾನಂದ್ ಖಾಸಗಿ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆಸ್ಪತ್ರೆಗೆ ಬರುತ್ತಿದ್ದಂತೆ ಹೆರಿಗೆ ಆಗಿದ್ದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಹೊರಗೆಯೇ ಹೆರಿಗೆ : ಸಿಬ್ಬಂದಿ ನಿರ್ಲಕ್ಷ್ಯ ಆರೋಪ - kannada news
ಸಿಬ್ಬಂದಿ ನಿರ್ಲಕ್ಷ್ಯದಿಂದ ಆಸ್ಪತ್ರೆಯ ಆವರಣದಲ್ಲೆ ಹೆರಿಗೆಯಾದ ಘಟನೆ ನಗರದಲ್ಲಿ ನಡೆದಿದ್ದು ಜಿಲ್ಲಾಸ್ಪತ್ರೆಯ ಸಿಬ್ಬಂದಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಿಲ್ಲಾಸ್ಪತ್ರೆಯ ಹೊರಗೆ ಹೆರಿಗೆ
ಇನ್ನೂ ಮಹಿಳೆಯ ಕುಟುಂಬಸ್ಥರು ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಜಿ.ಪಂ. ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್ ಘಟನೆ ಕುರಿತು ಪರಿಶೀಲನೆ ನಡೆಸಿದರು. ಘಟನೆಯಿಂದಾಗಿ ಜಿಲ್ಲಾಸ್ಪತ್ರೆ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.