ಚಿತ್ರದುರ್ಗ: ಲಡಾಖ್ ಪ್ರಾಂತ್ಯದ ಗಾಲ್ವಾನ್ ಕಣಿವೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ಚೀನಾ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಚೀನಾ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ - Young Congress activists protest
ಲಡಾಖ್ ಪ್ರಾಂತ್ಯದ ಗಾಲ್ವಾನ್ ಕಣಿವೆಯಲ್ಲಿ ಅಟ್ಟಹಾಸ ಮೆರೆಯುತ್ತಿರುವ ಚೀನಾ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಚೀನಿ ವಸ್ತುಗಳನ್ನು ಬಳಸಬಾರದು ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಪಾಪಿ ಚೀನಿ ವಸ್ತುಗಳನ್ನು ಬಳಸಬಾರದು ಎಂದು ಆಕ್ರೋಶ ಹೊರ ಹಾಕಿದರು. ಜಿಲ್ಲಾ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರಿಂದ ಈ ಪ್ರತಿಭಟನೆ ನಡೆಸಲಾಯಿತು.
ನಗರದ ಒನಕೆ ಓಬವ್ವ ವೃತ್ತದಲ್ಲಿ ಕಾರ್ಯಕರ್ತರು ಜಮಾಯಿಸಿ ಚೀನಾ ವಿರುದ್ಧ ಘೋಷಣೆ ಕೂಗುವ ಮೂಲಕ ಕಮ್ಯುನಿಸ್ಟ್ ಚೀನಾದ ನಡೆಯನ್ನು ವಿರೋಧಿಸಿದರು.