ಚಿತ್ರದುರ್ಗ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಪರಾಜಿತಗೊಂಡ ಯುವಕ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಹಿರಿಯೂರು ತಾಲ್ಲೂಕಿನ ಖಂಡೇನಹಳ್ಳಿ ಗ್ರಾಮದ ನರಸಿಂಹಮೂರ್ತಿ (26) ಮೃತ ದುರ್ದೈವಿಯಾಗಿದ್ದು, ಎರಡನೇ ಹಂತದ ಗ್ರಾಮ ಪಂಚಾಯತ್ ಚುನಾವಣೆಗೆ ಸ್ಪರ್ಧೆ ಮಾಡಿದ್ದ. ಫಲಿತಾಂಶ ಹೊರ ಬರುತ್ತಿದ್ದಂತೆ ಸೋಲು ಅನುಭವಿಸಿದ್ದಕ್ಕೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು ಬಂದಿದೆ. ಬಳಿಕ ಮನನೊಂದು ನೇಣಿಗೆ ಶರಣಾಗಿದ್ದಾನೆ.
ಚುನಾವಣೆಯಲ್ಲಿ ಸೋತಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ - ಚುನಾವಣಾಯಲ್ಲಿ ಸೋತಿದ್ದಕ್ಕೆ ಮನನೋಂದು ಯುವಕ ಆತ್ಮಹತ್ಯೆ
ಮೊದಲ ಬಾರಿಗೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಪರಾಜಿತಗೊಂಡ ಯುವಕನೋರ್ವ ಮನನೊಂದು ನೇಣಿಗೆ ಶರಣಾಗಿರುವ ಘಟನೆ ಹಿರಿಯೂರು ತಾಲ್ಲೂಕಿನ ಖಂಡೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಯುವಕ ಆತ್ಮಹತ್ಯೆ
ಓದಿ : ಹುಬ್ಬಳ್ಳಿ: ಶಾಸಕರ ಸಹೋದರನ ಪುತ್ರನ ಕಾರಿನ ಮೇಲೆ ಕಲ್ಲು ತೂರಾಟ
ಮೊದಲ ಬಾರಿಗೆ ಪಂಚಾಯತ್ ಚುನಾವಣೆಗೆ ಸ್ಪರ್ಧಿಸಿ ಪರಾಜಿತಗೊಂಡ ಬೆನ್ನಲ್ಲೇ ನೇಣಿಗೆ ಶರಣಾಗಿದ್ದು, ಹಿರಿಯೂರು ತಾಲೂಕಿನ ಅಬ್ಬಿನಹೊಳೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.