ಮಂಗಳೂರು: ಹತ್ತು ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6ಕ್ಕೇರಿದೆ.
ಮಂಗಳೂರಿನಲ್ಲಿ 10 ತಿಂಗಳ ಮಗುವಿಗೆ ಬಾಧಿಸಿದ ಕೊರೊನಾ! - baby corona case
ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿಗೆ ಕೊರೊನಾ ಸೋಂಕು ಬಾಧಿಸಿರುವುದು ದೃಢಪಟ್ಟಿದೆ.
ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮದ 10 ತಿಂಗಳ ಮಗು ಜ್ವರದಿಂದ ಬಳಲುತ್ತಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಲ್ಯಾಬ್ ಟೆಸ್ಟಿಂಗ್ ಪ್ರಕಾರ, ರಾಜ್ಯ ತಂಡದಿಂದ ಅನುಮತಿ ಪಡೆದು ಮಾ.24 ರಂದು ಮಗುವಿನ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿತ್ತು. ಲ್ಯಾಬ್ ವರದಿ ಪ್ರಕಾರ, ಮಗುವಿಗೆ ಕೋವಿಡ್-19 ಪಾಸಿಟಿವ್ ಎಂದು ಗೊತ್ತಾಗಿದೆ.
ಮಗುವಿನ ಹತ್ತಿರದ ಸಂಬಂಧಿಗಳನ್ನು ತೀವ್ರ ನಿಗಾವಣೆಯಲ್ಲಿರಿಸಲಾಗಿದ್ದು, ಮಗುವಿನ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ. ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ತಾಲೂಕಿನ ಸಜಿಪನಡು ಗ್ರಾಮವನ್ನು ಕ್ವಾರಂಟೈನ್ ಮಾಡಲಾಗಿದೆ. ಜನರು ಗ್ರಾಮದಿಂದ ಹೊರ ಮತ್ತು ಒಳ ಪ್ರವೇಶಿಸುವುದನ್ನು ತಡೆಹಿಡಿಯಲಾಗಿದೆ.