ಕರ್ನಾಟಕ

karnataka

ETV Bharat / state

ದಕ್ಷಿಣ ಕನ್ನಡ: 456 ಮಂದಿಗೆ ಕೊರೊನಾ... 11 ಮಂದಿ ಸಾವು - ಮಂಗಳೂರು ಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 456 ಮಂದಿಗೆ ಕೊರೊನಾ ಕಾಣಿಸಿಕೊಂಡಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.

11 death in dakshina kannada by corona
ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಮಂದಿ ಸಾವು, 456 ಪಾಸಿಟಿವ್

By

Published : Sep 18, 2020, 9:14 PM IST

ಮಂಗಳೂರು : ಕೊರೊನಾದಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, 456 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ.

ಕೊರೊನಾದಿಂದ ಸಾವನ್ನಪ್ಪಿದ 11 ಮಂದಿಯಲ್ಲಿ 6 ಮಂದಿ ಮಂಗಳೂರು ತಾಲೂಕಿನವರಾದರೆ, ತಲಾ ಒಬ್ಬರು ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಮತ್ತು ಇಬ್ಬರು ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 472 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 456 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಅದರಲ್ಲಿ 242 ಮಂದಿ ಮಂಗಳೂರು ತಾಲೂಕು, 86 ಬಂಟ್ವಾಳ ತಾಲೂಕು, 27 ಪುತ್ತೂರು ತಾಲೂಕು, 26 ಸುಳ್ಯ ತಾಲೂಕು, 40 ಬೆಳ್ತಂಗಡಿ ತಾಲೂಕು ಮತ್ತು 35 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19322 ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು 340 ಮಂದಿ ಗುಣಮುಖರಾಗಿದ್ದು, ಈವರೆಗೆ 14344 ಮಂದಿ ಗುಣಮುಖರಾದಂತಾಗಿದೆ. 4506 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details