ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 7 ಮಂದಿ ಮಹಿಳೆಯರು ಮತ್ತು 6 ಮಂದಿ ಪುರುಷರು ಸೇರಿ ಒಟ್ಟು 13 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ.
ಇವರು ಮೇ 2 ರಂದು ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 40 ವರ್ಷದ ಮಹಿಳೆಗೆ ಕೋವಿಡ್ -19 ಸೋಂಕಿನ ಜೊತೆಗೆ ಮೂತ್ರಕೋಶದ ತೊಂದರೆ, ಮಧುಮೇಹ ಸಮಸ್ಯೆ ಇದ್ದು, ಇವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಇವರೆಲ್ಲರೂ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ.
ದ.ಕ ಜಿಲ್ಲೆಯಲ್ಲಿ ಇಂದು 13 ಕೊರೊನಾ ಸೋಂಕಿತರು ಗುಣಮುಖ - Dhakshina kannada latest corona update
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 137 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಆ ಪೈಕಿ 69 ಮಂದಿ ಗುಣಮುಖರಾಗಿದ್ದಾರೆ.
![ದ.ಕ ಜಿಲ್ಲೆಯಲ್ಲಿ ಇಂದು 13 ಕೊರೊನಾ ಸೋಂಕಿತರು ಗುಣಮುಖ](https://etvbharatimages.akamaized.net/etvbharat/prod-images/768-512-7451066-165-7451066-1591118028130.jpg)
ದ.ಕ ಜಿಲ್ಲೆಯಲ್ಲಿ ಇಂದು 13 ಮಂದಿ ಕೊರೊನಾ ಸೋಂಕಿತರು ಗುಣಮುಖ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 137 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಇದರಲ್ಲಿ 69 ಮಂದಿ ಗುಣಮುಖರಾಗಿದ್ದಾರೆ. ಇಂದು 113 ಜನರ ಗಂಟಲು ದ್ರವ ಪರೀಕ್ಷೆಯ ವರದಿ ನೆಗೆಟಿವ್ ಬಂದಿದ್ದು, ಜಿಲ್ಲೆಯಲ್ಲಿ ಈ ವರೆಗೆ 7 ಮಂದಿ ಸಾವನ್ನಪ್ಪಿದ್ದು, 61 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.