ಉಳ್ಳಾಲ:ಪ್ರೇಕ್ಷಾ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಪ್ರಕರಣದಲ್ಲಿ ಬಂಧಿತನಾಗಿರುವ ಆಕೆಯ ಗೆಳೆಯ ಯತೀನ್ ರಾಜ್ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಮಾ. 10 ರಂದು ಕುಂಪಲ ಆಶ್ರಯಕಾಲನಿ ನಿವಾಸಿ ಪ್ರೇಕ್ಷಾ(17) ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಹೆತ್ತವರು ಹಾಗೂ ಸ್ಥಳೀಯರು ಕೊಲೆ ಶಂಕೆ ವ್ಯಕ್ತಪಡಿಸಿ ಗಾಂಜಾ ಗ್ಯಾಂಗ್ ಕೃತ್ಯ ಶಂಕಿಸಿದ್ದರು. ಅದರಂತೆ ಉಳ್ಳಾಲ ಪೊಲೀಸರು ಪ್ರೇಕ್ಷಾ ಆತ್ಮಹತ್ಯೆ ಸಂದರ್ಭ ಮನೆಗೆ ಬಂದಿದ್ದ ಗೆಳೆಯ ಸಹಿತ ಮೂವರು ಯುವಕರನ್ನು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ಕೈಗೊಂಡಿದ್ದರು. ಪ್ರಕರಣದಲ್ಲಿ ಸಿಕ್ಕ ಸಾಕ್ಷಿಯಂತೆ ಗೆಳೆಯ ಯತೀನ್ ರಾಜ್ನನ್ನು ಬಂಧಿಸಲಾಗಿದ್ದು, ಮತ್ತಿಬ್ಬರನ್ನು ಬಿಡುಗಡೆ ಗೊಳಿಸಲಾಗಿದೆ. ಮಾಡೆಲಿಂಗ್ ಶೂಟ್ಗೆ ಬೆಂಗಳೂರಿಗೆ ತೆರಳುವುದನ್ನು ಗೆಳೆಯ ಯತೀನ್ ವಿರೋಧಿಸಿದ ಹಿನ್ನೆಲೆ ಪ್ರೇಕ್ಷಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ವಿಚಾರ ಪೊಲೀಸರಿಂದ ತಿಳಿದು ಬಂದಿದೆ.
ಪ್ರೇಕ್ಷಾ ಸಾವು ಪ್ರಕರಣ: ಆರೋಪಿ ಯತೀನ್ ರಾಜ್ಗೆ 14 ದಿನಗಳ ನ್ಯಾಯಾಂಗ ಬಂಧನ - preksha suicide case updates
ಕುಂಪಲ ಆಶ್ರಯ ಕಾಲನಿಯ ವಿದ್ಯಾರ್ಥಿನಿ ಹಾಗೂ ಹವ್ಯಾಸಿ ಮಾಡೆಲ್ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಗೆಳೆಯ ಯತೀನ್ ರಾಜ್ನಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.
14 ದಿನಗಳ ನ್ಯಾಯಾಂಗ ಬಂಧನ
ಆಶ್ರಯಕಾಲನಿಯಲ್ಲಿ ಗಾಂಜಾ ಪತ್ತೆ ವಿರುದ್ಧ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಗಾಂಜಾ ಸೇವಿಸುತ್ತಿದ್ದ ಮತ್ತೆ 15 ಮಂದಿಯ ಪಟ್ಟಿ ತಯಾರಿಸಿದ್ದು, ಅವರಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಇದನ್ನೂ ಓದಿ:ವಿದ್ಯಾರ್ಥಿನಿ ಸಾವಿನ ಹಿಂದೆ ಗಾಂಜಾ ವ್ಯಸನಿಗಳ ಕೈವಾಡ?: ವ್ಯಕ್ತಿ ಮನೆ ಮೇಲೆ ಕಲ್ಲೆಸೆತ