ಮಂಗಳೂರು:ಸುರತ್ಕಲ್ನಲ್ಲಿ ಗುರುವಾರ ರಾತ್ರಿ ನಡೆದ ಯುವಕನ ಹತ್ಯೆ ನಡೆದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುರತ್ಕಲ್, ಮುಲ್ಕಿ, ಬಜ್ಪೆ ಮತ್ತು ಪಣಂಬೂರು ಠಾಣೆಯಲ್ಲಿ 144 ಸೆಕ್ಷನ್ನಡಿ ನಿಷೇಧಾಜ್ಞೆ ಹೇರಲಾಗಿತ್ತು. ಬಳಿಕ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸುಳ್ಯದ ಬೆಳ್ಳಾರೆಯಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ ನಂತರ ಗುರುವಾರ ರಾತ್ರಿ ಸುರತ್ಕಲ್ನಲ್ಲಿ ಅಂಗಡಿಯೊಂದರ ಬಳಿ ನಿಂತಿದ್ದ ಫಾಜಿಲ್ ಎಂಬ ಯುವಕನನ್ನು ಕಾರಿನಲ್ಲಿ ಬಂದ ಯುವಕರು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದರು. ಇದರ ಬಳಿಕ ಮತ್ತಷ್ಟು ಆತಂಕದ ಸ್ಥಿತಿ ನಿರ್ಮಾಣವಾಗಿದೆ. ಘಟನೆ ಬಳಿಕ ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಸುರತ್ಕಲ್, ಮುಲ್ಕಿ, ಬಜ್ಪೆ ಮತ್ತು ಪಣಂಬೂರು ಠಾಣೆ ವ್ಯಾಪ್ತಿಯಲ್ಲಿರುವ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.