ಕರ್ನಾಟಕ

karnataka

ಕೊರೊನಾ ಶಂಕೆ: ಮಂಗಳೂರಿನಲ್ಲಿ ಇಂದು 147 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

By

Published : May 7, 2020, 10:40 PM IST

ಮಂಗಳೂರಿನಲ್ಲಿ ಇಂದು 147 ಮಂದಿಯ ಗಂಟಲು ದ್ರವವನ್ನು ಪರೀಕ್ಷೆ ಮಾಡಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 272 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

147 throat fluids tested in Mangalore
ಮಂಗಳೂರಿನಲ್ಲಿ ಇಂದು 147 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 147 ಮಂದಿಯ ಗಂಟಲು ದ್ರವವನ್ನು ಪರೀಕ್ಷೆ ಮಾಡಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 272 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 92 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 92 ಕೂಡ ನೆಗೆಟಿವ್ ಬಂದಿವೆ. ಈವರೆಗೆ 3791 ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 28 ಪಾಸಿಟಿವ್ ಮತ್ತು 3763 ನೆಗೆಟಿವ್ ಬಂದಿವೆ. ಇಂದು 24 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 40,327 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ.

ಇಎಸ್ಐ ಆಸ್ಪತ್ರೆಯಲ್ಲಿ 40 ಮಂದಿ, ಎನ್​ಐಟಿಕೆಯಲ್ಲಿ 39 ಮಂದಿ ಕ್ವಾರಂಟೈನ್​​ನಲ್ಲಿ ಇದ್ದಾರೆ. ಇಂದಿಗೆ 6073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ. ಕೊರೊನಾ ಪಾಸಿಟಿವ್ ಬಂದಿದ್ದ 13 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮೂವರು ಸಾವನ್ನಪ್ಪಿದ್ದಾರೆ. 12 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

For All Latest Updates

ABOUT THE AUTHOR

...view details