ಮಂಗಳೂರು : ನಗರದ ಬಳ್ಳಾಲ್ ಬಾಗ್ನಲ್ಲಿ ನಡೆದಿರುವ ಮಾರಾಮಾರಿ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿದೆ. ನಿನ್ನೆ ತಡರಾತ್ರಿ ಎರಡು ತಂಡಗಳ ನಡುವೆ ವಿಕೆಟ್, ಪೈಪ್, ಕಲ್ಲು ಹಿಡಿದುಕೊಂಡು ಮಾರಾಮಾರಿ ನಡೆದಿದೆ.
ಮಂಗಳೂರು : ಮಾರಾಮಾರಿ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿಕೆ - ಮಾರಾಮಾರಿ ತಡೆಯಲು ಹೋದ ಮಹಿಳಾ ಪೊಲೀಸ್ ಅಧಿಕಾರಿ ಮೇಲೆ ಹಲ್ಲೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಘಟನೆ ನಡೆದ ಸಂದರ್ಭದಲ್ಲಿಯೇ ವಶಪಡಿಸಿಕೊಳ್ಳಲಾಗಿತ್ತು. ಉಳಿದ ಎಂಟು ಆರೋಪಿಗಳನ್ನು ಇಂದು ಸಂಜೆ ಬಂಧಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ..
![ಮಂಗಳೂರು : ಮಾರಾಮಾರಿ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿಕೆ ಮಾರಾಮಾರಿ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿಕೆ](https://etvbharatimages.akamaized.net/etvbharat/prod-images/768-512-13514030-thumbnail-3x2-ndndn.jpg)
ಮಾರಾಮಾರಿ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿಕೆ
ಮಾರಾಮಾರಿ ಪ್ರಕರಣದ ಬಂಧಿತ ಆರೋಪಿಗಳ ಸಂಖ್ಯೆ 15ಕ್ಕೆ ಏರಿಕೆ
ಈ ಸಂದರ್ಭ ಒಂದು ಕಾರು ಸೇರಿದಂತೆ ಆರು ದ್ವಿಚಕ್ರ ವಾಹನಗಳು ಜಖಂಗೊಂಡಿದೆ. ಅಲ್ಲದೆ ಘಟನೆಯ ವೇಳೆ ಮಾರಾಮಾರಿಯನ್ನು ತಡೆಯಲೆತ್ನಿಸಿದ ಮಹಿಳಾ ಪೊಲೀಸ್ ಅಧಿಕಾರಿಯೋರ್ವರನ್ನು ಆರೋಪಿಯೋರ್ವನು ತಳ್ಳಾಟ ನಡೆಸಿ ಅವರ ವಾಕಿಟಾಕಿಯನ್ನು ಕಿತ್ತು ನೆಲಕ್ಕೆಸಿದಿದ್ದಾನೆ. ಉಳಿದ ಕೆಲ ಆರೋಪಿಗಳು ಮಾರಾಮಾರಿಯನ್ನು ಬಿಡಿಸದಂತೆ ತಡೆದಿರುವ ಬಗ್ಗೆ ದೂರು ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನು ಘಟನೆ ನಡೆದ ಸಂದರ್ಭದಲ್ಲಿಯೇ ವಶಪಡಿಸಿಕೊಳ್ಳಲಾಗಿತ್ತು. ಉಳಿದ ಎಂಟು ಆರೋಪಿಗಳನ್ನು ಇಂದು ಸಂಜೆ ಬಂಧಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಸುಮೋಟೊ ಪ್ರಕರಣ ದಾಖಲಾಗಿದೆ.