ಕರ್ನಾಟಕ

karnataka

ETV Bharat / state

ಉಪ್ಪಿನಂಗಡಿ: ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ 15 ಲಕ್ಷ ಪರಿಹಾರ ಮಂಜೂರು

ಮೂರು ದಿನದ ಹಿಂದೆ ಕಾಡಾನೆ ದಾಳಿಗೆ ಒಳಗಾಗಿದ್ದ ವ್ಯಕ್ತಿ- ತಂದೆ ಸಾವು, ಮಗನ ಸ್ಥಿತಿ ಗಂಭೀರ- ಮೃತನ ಕುಟುಂಬ ಸರ್ಕಾರದಿಂದ ಪರಿಹಾರ ವಿತರಣೆ

ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಗೆ 15 ಲಕ್ಷ ಪರಿಹಾರ ಮಂಜೂರು
15-lakh-compensation-sanctioned-to-the-person-who-died-due-to-forest-attack

By

Published : Jan 4, 2023, 5:40 PM IST

ಉಪ್ಪಿನಂಗಡಿ(ದಕ್ಷಿಣ ಕನ್ನಡ): ರಾಜ್ಯದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಆನಗೆಳು ನಾಡಿಗೆ ಬಂದು ಜನರ ಮೇಲೆ ದಾಳಿ ಮಾಡುವುದರಿಂದ ಬೆಳೆಗಳ ಜೊತೆಗೆ ಪ್ರಾಣ ಹಾನಿಯಂಥ ಪ್ರಕರಣಗಳು ವರಿದಯಾಗಿವೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ, ಮೈಸೂರು ಮತ್ತು ಚಾಮರಾನಗರ ಜಿಲ್ಲೆಯಲ್ಲಿ ಜನರು ಕಾಡಾನೆಗಳ ಕಾಟಕ್ಕೆ ಬೇತ್ತಿದ್ದಾರೆ. ಇದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ದಿನದ ಹಿಂದೆ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಕಡಬ ತಾಲೂಕಿನ ಶಿರಾಡಿ ಗ್ರಾಮದ ಜನತಾ ಕಾಲೋನಿ ನಿವಾಸಿ ತಿಮ್ಮಪ್ಪ ಎಂಬವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ ಮಂಜೂರಾದ 15 ಲಕ್ಷ ರೂಪಾಯಿ ಮೊತ್ತದಲ್ಲಿ 5 ಲಕ್ಷ ರೂ. ಪರಿಹಾರ ಮೊತ್ತದ ಚೆಕ್ ಅನ್ನು ಕುಟುಂಬಸ್ಥರಿಗೆ ಬುಧವಾರ ಹಸ್ತಾಂತರಿಸಲಾಯಿತು.

ಕರ್ನಾಟಕ ಅರಣ್ಯ ಇಲಾಖೆಯಿಂದ ಸುಮಾರು 15 ಲಕ್ಷ ರೂಪಾಯಿ ಪರಿಹಾರ ಧನವು ಮಂಜೂರು ಆಗಿದ್ದು, ಈ ಪೈಕಿ 5 ಲಕ್ಷ ರೂಪಾಯಿ ಮೊತ್ತದ ಚೆಕ್ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ತಿಮ್ಮಪ್ಪ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ. ಈ ಬಗ್ಗೆ ಈಟಿವಿ ಭಾರತದೊಂದಿಗೆ ಮಾತನಾಡಿದ ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಅವರು, ಈಗಾಗಲೇ ಭದ್ರಾ ಟೈಗರ್ ಫೌಂಡೇಷನ್ ಚಿಕ್ಕಮಗಳೂರು ಇವರ ಸಹಕಾರದೊಂದಿಗೆ ಸುಮಾರು 5ಲಕ್ಷ ಮೊತ್ತದ ಚೆಕ್ ಅನ್ನು ಸಂತ್ರಸ್ತರಿಗೆ ಇಂದು ಹಸ್ತಾಂತರ ಮಾಡಿದ್ದೇವೆ. ಉಳಿದ 10ಲಕ್ಷ ಮೊತ್ತವನ್ನು ಕೆಲವು ದಾಖಲೆ ಪತ್ರಗಳು ಸರಿಯಾದ ಕೂಡಲೇ ಮೃತರ ಕುಟುಂಬಕ್ಕೆ ನೀಡಲಾಗುವುದು ಎಂದಿದ್ದಾರೆ.

ಅರಣ್ಯ ಇಲಾಖೆಯ ಡಿಸಿಎಫ್ ಡಾ.ದಿನೇಶ್‌ಕುಮಾರ್, ಎಸಿಎಫ್ ವಿ.ಪಿ.ಕಾರ್ಯಪ್ಪ, ಆರ್‌ಎಫ್ಒ ಜಯಪ್ರಕಾಶ್ ಕೆ.ಕೆ., ಡಿಆರ್‌ಎಫ್ಒ ಧೀರಜ್, ಫಾರೆಸ್ಟರ್ ಸುನಿಲ್ ನಾಯ್ಕ್‌ರವರು ಚೆಕ್ ಹಸ್ತಾಂತರಿಸಿದರು. ತಿಮ್ಮಪ್ಪ ಮತ್ತು ಅವರ ಮಗ ಶರಣ್​ ಕಾರ್ಯ ನಿಮಿತ್ತ ತೆರಳುತ್ತಿದ್ದ ವೇಳೆ ತಿಮ್ಮಪ್ಪ ಅವರ ಮೇಲೆ ಕಾಡಾನೆ ದಾಳಿ ನಡೆಸಿತ್ತು. ಈ ವೇಳೆ ತಿಮ್ಮಪ್ಪ ಅವರ ರಕ್ಷಣೆಗೆ ಧಾವಿಸಿದ ಮಗನ ಮೇಲೂ ಕಾಡಾನೆ ದಾಳಿ ನಡೆಸಿತ್ತು. ಘಟನೆಯಲ್ಲಿ ಕಾಡಾನೆ ತಿವಿತದಿಂದ ಗಂಭೀರ ಗಾಯಗೊಂಡಿದ್ದ ತಿಮ್ಮಪ್ಪ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಮಗ ಶರಣ್ ಅವರು ಈಗಲೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಲೆನಾಡು, ಕಾಡಂಚಿನ ಭಾಗದಲ್ಲಿ ಮುಂದುವರೆದ ಕಾಡಾನೆ ದಾಳಿ:ಹಾಸನ, ದಕ್ಷಿಣ ಕನ್ನಡ, ಚಾಮರಾಜನಗರ ಸೇರಿದಂತೆ ಕಾಡಾಂಚಿನ ಪ್ರದೇಶದಲ್ಲಿ ಕಾಡಾನೆ ದಾಳಿ ನಿರಂತರವಾಗಿ ನಡೆಯುತ್ತಲೇ ಇದೆ. ಕಾಡಾನೆ ದಾಳಿಯಿಂದಾಗಿ ಸ್ಥಳೀಯರು ಆತಂಕದಲ್ಲೇ ಜೀವನ ಸಾಗಿಸುವ ಪ್ರಸಂಗ ಎದುರಾಗಿದೆ. ಈ ಬಗ್ಗೆ ಸರ್ಕಾರದ ವಿರುದ್ಧ ಕೂಡ ಆಕ್ರೋಶ ವ್ಯಕ್ತವಾಗಿದೆ.

ಕಾಡಾನೆ ದಾಳಿ ಪರಿಹಾರ ಹೆಚ್ಚಳ:ಕಾಡಾನೆ ದಾಳಿಯಿಂದ ಮೃತಪಡುವವರಿಗೆ ಪರಿಹಾರವನ್ನು 7.5 ಲಕ್ಷ ದಿಂದ 15 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಈ ಆದೇಶವನ್ನು ಡಿಸೆಂಬರ್ 15 ರಂದೇ ಸರ್ಕಾರದಿಂದ ಮಾಡಲಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ವಿಧಾನಸಭಾ ಅಧಿವೇಶನದಲ್ಲಿ ತಿಳಿಸಿದ್ದರು. ಕಾಡಾನೆ ಹಾವಳಿ ತಡೆಗಟ್ಟಲು ರಚಿಸಲಾಗಿರುವ ಟಾಸ್ಕ್ ಫೋರ್ಸ್​ಗೆ ಅಗತ್ಯ ಸಿಬ್ಬಂದಿಯನ್ನು ನೇಮಕ ಮಾಡುವ ವಿಚಾರವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರುವುದಾಗಿ ಅವರು ಹೇಳಿದ್ದರು.

ಹಲವು ಜನರು ಕಾಡು ಆನೆ ದಾಳಿಯಿಂದ ಬಲಿಯಾಗಿದ್ದಾರೆ. ಆನೆ ಹಾವಳಿ ತಡೆಗೆ ಟಾಸ್ಕ್ ಫೋರ್ಸ್ ಮಾಡುತ್ತೇವೆ. ಅದಕ್ಕೆ 47 ಸಿಬ್ಬಂದಿ ಅನ್ನು ನೇಮಿಸಲಾಗಿದೆ ಎಂದು ವಿವರಣೆ ನೀಡಿದರು.

ಇದನ್ನೂ ಓದಿ: ರಾಜರಾಜೇಶ್ವರಿನಗರ ಹಾಸ್ಟೆಲ್​​ ವಿದ್ಯಾರ್ಥಿನಿಯರಿಗೆ ದೌರ್ಜನ್ಯ, ಕಿರುಕುಳ ತಪ್ಪಿಸಿ: ಸೌಮ್ಯ ರೆಡ್ಡಿ

ABOUT THE AUTHOR

...view details