ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 151 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಕೊರೊನಾ ಶಂಕೆ: ಇಂದು ಮಂಗಳೂರಿನಲ್ಲಿ 151 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - 151 people in Mangalore to be tested for throat fluid today
ಮಂಗಳೂರಿನಲ್ಲಿ ಇಂದು 151 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆಂದು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಈ ಹಿಂದೆ ಕಳುಹಿಸಲಾದ 7 ಮಂದಿಯ ವರದಿ ನೆಗೆಟಿವ್ ಬಂದಿದೆ. ಈ ವರೆಗೆ 720 ಮಂದಿಯ ಗಂಟಲು ದ್ರವ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 13 ಪಾಸಿಟಿವ್ ಮತ್ತು 707 ನೆಗೆಟಿವ್ ಬಂದಿವೆ.
ಇಂದು 46 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39,126 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಹೋಮ್ ಕ್ವಾರಂಟೈನ್ನಲ್ಲಿ 260 ಮಂದಿ ಇದ್ದು, 15 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್ನಲ್ಲಿ ಇದ್ದಾರೆ. ಇಂದಿಗೆ 5,813 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ . ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇನ್ನೂ ಓರ್ವ ವ್ಯಕ್ತಿ ಚಿಕಿತ್ಸೆ ಪಡೆಯುತ್ತಿದ್ದಾರೆ.