ಮಂಗಳೂರು: ನಿಯಮ ಉಲ್ಲಂಘಿಸಿ ಉಳ್ಳಾಲ ಮತ್ತು ಮುಕ್ಕದಲ್ಲಿ ಕಾರ್ಯಾಚರಿಸುತ್ತಿದ್ದ 16 ಫಿಶ್ ಮಿಲ್ ಕಾರ್ಖಾನೆಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶದಂತೆ ಬಂದ್ ಮಾಡಲಾಗಿದೆ. ಈ ಫಿಶ್ ಮಿಲ್ ಕಾರ್ಖಾನೆಗಳನ್ನು ಮುಚ್ಚುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶಿಸಿದ್ದು, ಅದರಂತೆ 16 ಫಿಶ್ ಮಿಲ್ ಗಳನ್ನು ಬಂದ್ ಮಾಡಲಾಗಿದೆ.
ಜೊತೆಗೆ ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೂ ಫಿಶ್ ಮಿಲ್‌ಗಳಿಗೆ ಒದಗಿಸಿರುವ ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಸೂಚನೆ ನೀಡಲಾಗಿದೆ. ಮಾಲಿನ್ಯ ಮಂಡಳಿ ಆದೇಶದನುಸಾರವಾಗಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕಚೇರಿಯಿಂದ ತಹಸೀಲ್ದಾರ್‌ಗೆ ಮತ್ತು ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.