ಮಂಗಳೂರು: ಅನಿವಾಸಿ ಭಾರತೀಯರನ್ನು ಹೊತ್ತು ತಂದ ಎರಡನೇ ವಿಮಾನ ನಿನ್ನೆ ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ.
ದುಬೈನಿಂದ ಮಂಗಳೂರಿಗೆ ಬಂದ 178 ಮಂದಿ ಅನಿವಾಸಿ ಭಾರತೀಯರು - Mangalore news
ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಸುಮಾರು 178 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ನಿನ್ನೆ ಸಂಜೆ 7.55ಕ್ಕೆ ಬಂದಿಳಿದಿದೆ. ರಾತ್ರಿ ಪ್ರಯಾಣಿಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೆ ಪ್ರಯಾಣಿಕರನ್ನು ನಿಗದಿತ ಕ್ವಾರೆಂಟೈನ್ ಕೇಂದ್ರಗಳಿಗೆ ತಲುಪಿಸಲು ಜಿಲ್ಲಾಡಳಿತ ಬಸ್ ವ್ಯವಸ್ಥೆ ಮಾಡಿದೆ.

ಯುನೈಟೆಡ್ ಅರಬ್ ಎಮಿರೇಟ್ಸ್ ನಿಂದ ಸುಮಾರು 178 ಪ್ರಯಾಣಿಕರನ್ನು ಹೊತ್ತು ತಂದ ವಿಮಾನ ನಿನ್ನೆ ಸಂಜೆ 7.55ಕ್ಕೆ ಬಂದಿಳಿದಿದೆ. ವಿಮಾನ ಮಂಗಳೂರು ತಲುಪಿದ ತಕ್ಷಣ ಪ್ರಯಾಣಿಕರಿಗೆ ಏರ್ಪೋರ್ಟ್ನಲ್ಲಿ ಹಣ ವರ್ಗಾವಣೆ, ಸಿಮ್ ವಿತರಣೆ, ಆರೋಗ್ಯ ಕಿಟ್ ವಿತರಣೆ, ಉಪಹಾರ ವ್ಯವಸ್ಥೆ ಮಾಡಲಾಯಿತು. ಬಳಿಕ ಆರೋಗ್ಯ ಅಧಿಕಾರಿಗಳ ತಂಡದಿಂದ ಪ್ರತೀ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಯಿತು.
ರಾತ್ರಿ ಎಲ್ಲ ಪ್ರಯಾಣಿಕರಿಗೆ ಊಟದ ವ್ಯವಸ್ಥೆ ಮಾಡಲಾಯಿತು. ಅಲ್ಲದೆ ಪ್ರಯಾಣಿಕರನ್ನು ನಿಗದಿತ ಕ್ವಾರಂಟೈನ್ ಕೇಂದ್ರಗಳಿಗೆ ತಲುಪಿಸಲು ಜಿಲ್ಲಾಡಳಿತ ಬಸ್ ವ್ಯವಸ್ಥೆ ಮಾಡಿದೆ. ಇಂದು ವಿದೇಶದಿಂದ ಬಂದ ಎಲ್ಲರ ಗಂಟಲು ದ್ರವ ಪರೀಕ್ಷೆ ನಡೆಯಲಿದೆ.