ಮಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ಇಂದು 198 ಶಂಕಿತರ ಗಂಟಲು ದ್ರವವನ್ನು ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, 580 ಜನರ ವರದಿಯನ್ನು ಎದುರು ನೋಡಲಾಗುತ್ತಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 63 ಪ್ರಕರಣಗಳು ದೃಢಪಟ್ಟಿದ್ದು, ಇದರಲ್ಲಿ ಒಂದು ಆತ್ಮಹತ್ಯೆ ಪ್ರಕರಣ ಸೇರಿದಂತೆ 6 ಮಂದಿ ಸಾವನ್ನಪ್ಪಿದ್ದಾರೆ. 21 ಮಂದಿ ಗುಣಮುಖರಾಗಿದ್ದು 36 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 84 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರಿಗೆ ಒಟ್ಟು 41,849 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಮಂಗಳೂರಿನ ಎನ್ಐಟಿಕೆಯಲ್ಲಿ 32 ಮಂದಿ ಇಎಸ್ಐ ಆಸ್ಪತ್ರೆಯಲ್ಲಿ 18 ಮಂದಿ ಕ್ವಾರಂಟೈನಲ್ಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 3,840 ಮಂದಿ ಕ್ಲಿನಿಕ್ನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಇಂದು ಉಸಿರಾಟದ ತೊಂದರೆ ಇರುವ 4 ಮಂದಿ ಪತ್ತೆಯಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.