ಕರ್ನಾಟಕ

karnataka

ETV Bharat / state

ಪುತ್ತೂರು: ಇಂದು ಇಬ್ಬರಲ್ಲಿ ಕೊರೊನಾ ಸೋಂಕು ದೃಢ - Puttur Mangalore latest news

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ 1 ಮತ್ತು ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿದ್ದು, ಇವರ ಮನೆಗಳನ್ನು ಸೀಲ್ ಡೌನ್ ಮಾಡಲಾಗಿದೆ.

Puttur corona Case
Puttur corona Case

By

Published : Jul 9, 2020, 4:30 PM IST

ಪುತ್ತೂರು: ಕೊರೊನಾ ಸೋಂಕಿತರ ಪ್ರಮಾಣ ದಿನೇ-ದಿನೆ ಏರಿಕೆಯಾಗುತ್ತಿದ್ದು, ಇಂದು ಎರಡು ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ನಗರಸಭಾ ವ್ಯಾಪ್ತಿಯಲ್ಲಿ 1 ಮತ್ತು ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ 1 ಕೊರೊನಾ ಪ್ರಕರಣ ಪತ್ತೆಯಾಗಿವೆ.

ನಗರಸಭಾ ವ್ಯಾಪ್ತಿಯ ಬೊಳುವಾರು ಮಿಷನ್ ಗುಡ್ಡೆ ನಿವಾಸಿ 56 ವರ್ಷದ ಮಹಿಳೆ ಅನಾರೋಗ್ಯದ ಕಾರಣದಿಂದ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಇವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಅದೇ ರೀತಿ ಈಶ್ವರಮಂಗಲ ನಿವಾಸಿ 55 ವರ್ಷದ ವ್ಯಕ್ತಿಯೊಬ್ಬರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಜ್ವರದ ಹಿನ್ನೆಲೆಯಲ್ಲಿ ದಾಖಲಾಗಿದ್ದರು. ಸದ್ಯ ಇವರಿಗೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಇನ್ನೂ ಸೋಂಕು ದೃಢಪಟ್ಟ ಇಬ್ಬರ ಮನೆಗಳನ್ನು ಸೀಲ್‌ಡೌನ್ ಮಾಡಲಾಗಿದೆ.

ABOUT THE AUTHOR

...view details