ಪುತ್ತೂರು (ದ.ಕ):ಜುಲೈ 14 ರಂದು ಪುತ್ತೂರು ಸರಕಾರಿ ಆಸ್ಪತ್ರೆಯ 45 ವರ್ಷ ವಯಸ್ಸಿನ ಆಯುರ್ವೇದ ವೈದ್ಯೆ ಮತ್ತು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊಳ್ತಿಗೆ ನಿವಾಸಿಯೊಬ್ಬರಿಗೆ ಕೊರೊನಾ ದೃಢಪಟ್ಟಿದೆ.
ಪುತ್ತೂರಿನಲ್ಲಿ 2 ಕೊರೊನಾ ಸೋಂಕು ಪತ್ತೆ; ಸರಕಾರಿ ಆಸ್ಪತ್ರೆ ವೈದ್ಯೆಗೂ ಸೋಂಕು - ಪುತ್ತೂರು ಕೊರೊನಾ ಸುದ್ದಿ
ಪುತ್ತೂರು ಸರಕಾರಿ ಆಸ್ಪತ್ರೆಯ ಆಯುರ್ವೇದ ವಿಭಾಗದಲ್ಲಿ ಕೆಲಸ ಮಾಡುವ ವೈದ್ಯೆಯೊಬ್ಬರು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ದೃಢಪಟ್ಟಿದೆ. ಅವರು ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪುತ್ತೂರು
ಪುತ್ತೂರು ಸರಕಾರಿ ಆಸ್ಪತ್ರೆಯ ಆಯುರ್ವೇದ ವಿಭಾಗದಲ್ಲಿ ಕೆಲಸ ಮಾಡುವ ವೈದ್ಯೆಯೊಬ್ಬರು ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕೊರೊನಾ ದೃಢಪಟ್ಟಿದೆ. ಅವರು ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗಿಯಾಗಿರುವ ಕೊಳ್ತಿಗೆ ಗ್ರಾಮದ 29 ವರ್ಷದ ಯುವಕರೊಬ್ಬರು ಅನಾರೋಗ್ಯ ನಿಮಿತ್ತ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಅಲ್ಲಿ ಅವರ ಗಂಟಲು ದ್ರವ ಪರೀಕ್ಷೆ ವೇಳೆ ಅವರಿಗೆ ಕೊರೊನಾ ದೃಢಪಟ್ಟಿದೆ. ಅವರು ಮಂಗಳೂರು ಅಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.