ಕರ್ನಾಟಕ

karnataka

ETV Bharat / state

Amarnath Yatra: ಅಮರನಾಥ ಯಾತ್ರೆಗೆ ಹೊರಟಿದ್ದ ಬಂಟ್ವಾಳದ ಭಕ್ತರು ಸೇರಿದಂತೆ ಕರಾವಳಿಯ 20 ಮಂದಿ ಸೇಫ್

ಸಿಆರ್​ಪಿಎಫ್ ಮತ್ತು ಸೇನಾ ಕ್ಯಾಂಪ್​ನಲ್ಲಿ ಕರಾವಳಿಯ 20 ಮಂದಿ ಸೇಫ್ ಆಗಿದ್ದಾರೆ.

ಅಮರನಾಥ ಯಾತ್ರೆ
ಅಮರನಾಥ ಯಾತ್ರೆ

By

Published : Jul 9, 2023, 3:22 PM IST

ಬಂಟ್ವಾಳ (ದಕ್ಷಿಣ ಕನ್ನಡ) : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆ ಮತ್ತು ಭೂಕುಸಿತ ಉಂಟಾಗುತ್ತಿದ್ದು, ಅಮರನಾಥ ಯಾತ್ರೆಯನ್ನು ಜುಲೈ 7 ಶುಕ್ರವಾರದಿಂದಲೇ ಸ್ಥಗಿತಗೊಳಿಸಲಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳು ಭಾನುವಾರ ಜಮ್ಮು ಬೇಸ್ ಕ್ಯಾಂಪ್‌ನಲ್ಲಿ ಭಕ್ತರ ಗುಂಪನ್ನು ತಡೆದಿದ್ದು, ಯಾತ್ರೆಯನ್ನು ಸ್ಥಗಿತಗೊಳಿಸಿದ ನಂತರ 6 ಸಾವಿರ ಅಮರನಾಥ ಯಾತ್ರಾರ್ಥಿಗಳು ರಾಂಬನ್‌ನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಆದರೆ ಯಾತ್ರಾರ್ಥಿಗಳು ಅಲ್ಲಲ್ಲಿ ಸಿಲುಕಿಕೊಂಡಿರುವುದರಿಂದ ತುಸು ಗೊಂದಲಕ್ಕೆ ಕಾರಣವಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 20 ಯಾತ್ರಾರ್ಥಿಗಳು ಸುರಕ್ಷಿತವಾಗಿ ಇದ್ದೇವೆ ಎಂದು ತಂಡದ ನೇತೃತ್ವ ವಹಿಸಿರುವ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸಂತೋಷ್ ಮಾರುತಿನಗರ ತಿಳಿಸಿದ್ದಾರೆ. ಜುಲೈ 4ರಂದು ರೈಲಿನ ಮೂಲಕ ಹೊರಟಿದ್ದು, ಅಮರನಾಥ ಯಾತ್ರೆ ಬಳಿಕ ವೈಷ್ಣೋದೇವಿ ಯಾತ್ರೆ ಮಾಡಲಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಯಿಂದ ನಾವು 20 ಮಂದಿ ಇದ್ದೇವೆ ಎಂದು ಹೇಳಿರುವ ಸಂತೋಷ್, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದಿಂದ ಒಟ್ಟು 5 ಯಾತ್ರಾರ್ಥಿಗಳು, ಮಂಗಳೂರು ಅಡ್ಯಾರಿನಿಂದ 8, ಪುತ್ತೂರು, ಉಡುಪಿ, ಮೂಡಬಿದಿರೆಯಿಂದ ತಲಾ ಒಬ್ಬರು, ಸಜೀಪದಿಂದ 3, ಉಪ್ಪಿನಂಗಡಿ ಕರಾಯದಿಂದ ಒಬ್ಬರು ಹೀಗೆ ಒಟ್ಟು 20 ಯಾತ್ರಾರ್ಥಿಗಳು ಯಾತ್ರೆಗೆ ತೆರಳಿದ್ದಾಗಿ ತಿಳಿಸಿದ್ದಾರೆ.

ಇದನ್ನೂ ಓದಿ :ಹವಾಮಾನದಲ್ಲಿ ಸುಧಾರಣೆ: 3 ದಿನದಿಂದ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ

ನಾವೆಲ್ಲರೂ ಅಮರನಾಥ ದೇವಲಯಕ್ಕೂ ಹೋಗಲು ಸಾಧ್ಯವಾಗದೆ, ಅತ್ತ ಕೆಳಗೆ ಜಮ್ಮು ಮತ್ತು ಕಾಶ್ಮೀರಕ್ಕೂ ಹೋಗಲು ಸಾಧ್ಯವಾಗದೆ ಸಿಆರ್​ಪಿಎಫ್ ಮತ್ತು ಸೇನಾ ಕ್ಯಾಂಪ್​ನಲ್ಲಿದ್ದೇವೆ. ಯಾವುದೇ ತೊಂದರೆಯಿಲ್ಲದೆ ಸುರಕ್ಷಿತವಾಗಿದ್ದೇವೆ. ಸದ್ಯಕ್ಕೆ ಎಲ್ಲೂ ಹೋಗಲು ಆಗುತ್ತಿಲ್ಲ. ಆದರೆ ನಮ್ಮ ಸುರಕ್ಷತೆಯ ದೃಷ್ಟಿಯಿಂದ ಸೇನೆಯವರು ಕ್ರಮ ಕೈಗೊಳ್ಳುತ್ತಿದ್ದಾರೆ. ಅತಿಯಾದ ಮಳೆಗೆ ಭೂಕುಸಿತ ಕಂಡು ಬಂದಿದ್ದು, ಯಾತ್ರಾರ್ಥಿಗಳು ಜಾಗರೂಕತೆಯಿಂದ ಇರುವಂತೆ ತಿಳಿಸಿದ್ದಾರೆ. ಹೀಗಾಗಿ ಸದ್ಯ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಸೂಚನೆ :ಪವಿತ್ರ ಅಮರನಾಥ ಯಾತ್ರೆಗೆ ತೆರಳಿ ಹವಾಮಾನ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ ಸುರಕ್ಷಿತವಾಗಿ ತವರಿಗೆ ಕರೆತರಲು ಅಗತ್ಯವಾದ ಎಲ್ಲ ನೆರವನ್ನು ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರಿಗಳಿಗೆ ಸೂಚಿನೆ ಕೊಟ್ಟಿದ್ದಾರೆ. ಗದಗದಿಂದ ತೆರಳಿರುವ 23 ಮಂದಿ ಹಾಗೂ ಈಗಾಗಲೇ ಸೇನೆ ಕ್ಯಾಂಪ್​ನಲ್ಲಿರುವ ಕರವಾಳಿ ಭಾಗದ 20 ಸೇರಿ ಒಟ್ಟು 80 ಮಂದಿ ಕನ್ನಡಿಗರು ಅಮರನಾಥ ಮಂದಿರದಿಂದ 6 ಕಿ.ಮೀ ದೂರದಲ್ಲಿರುವ ಪಂಚತಾರ್ನಿ ಟೆಂಟ್​​ನಲ್ಲಿ ಸಿಲುಕಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿನ್ನೆ (ಶನಿವಾರ) ತಿಳಿಸಿದ್ದರು.

ಇದನ್ನೂ ಓದಿ :ಮಳೆಯಿಂದ ಅಮರನಾಥ ಮಾರ್ಗ ಮಧ್ಯೆ ಗುಡ್ಡ ಕುಸಿತ: ಸಂಕಷ್ಟಕ್ಕೆ ಸಿಲುಕಿದ ಧಾರವಾಡದ ಐವರು ಗೆಳೆಯರು

ABOUT THE AUTHOR

...view details