ಕರ್ನಾಟಕ

karnataka

ETV Bharat / state

ಅಪ್ರಾಪ್ತ ಪುತ್ರಿ ಮೇಲೆ ಅತ್ಯಾಚಾರ.. ಕಾಮುಕ ತಂದೆಗೆ 20 ವರ್ಷ ಕಠಿಣ ಶಿಕ್ಷೆ - father raped on his minor daughter

2020ರ ಮಾರ್ಚ್​​ನಲ್ಲಿ ಪುತ್ರಿ ಮೇಲೆ ಅತ್ಯಾಚಾರ- ಕಾಮುಕ ತಂದೆಗೆ 20 ವರ್ಷ ಕಠಿಣ ಶಿಕ್ಷೆ- 25 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

20 years imprisonment to father who raped on his daughter in Mangalore
ಅಪ್ರಾಪ್ತೆ ಪುತ್ರಿ ಮೇಲೆ ಅತ್ಯಾಚಾರ: ಕಾಮುಕ ತಂದೆಗೆ 20 ವರ್ಷ ಕಠಿಣ ಶಿಕ್ಷೆ

By

Published : Jul 27, 2022, 4:07 PM IST

ಮಂಗಳೂರು: ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆಯೇ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಆರೋಪಿ ತಂದೆಗೆ 20 ವರ್ಷ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ. ವಿಟ್ಲದ ಪೆರುವಾಯಿ ಗ್ರಾಮದ ನಿವಾಸಿ ಶಿಕ್ಷೆಗೊಳಗಾದ ಅಪರಾಧಿ‌.

ಮಂಗಳೂರಿನ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಂ ರಾಧಾಕೃಷ್ಣ ಅವರು 20 ವರ್ಷ ಕಠಿಣ ಶಿಕ್ಷೆ ಜೊತೆಗೆ 25 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. 2020ರ ಮಾರ್ಚ್​​ನಲ್ಲಿ ಈತ ತನ್ನ ಅಪ್ರಾಪ್ತ ಪುತ್ರಿಯ ಮೇಲೆಯೇ ಅತ್ಯಾಚಾರ ಎಸಗಿದ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಕರಣವನ್ನು ಮಂಗಳೂರಿನ ಜಿಲ್ಲಾ ನ್ಯಾಯಾಲಯ ಕೈಗೆತ್ತಿಕೊಂಡು ಸಲ್ಲಿಕೆಯಾಗಿರುವ ಸಾಕ್ಷ್ಯಾಧಾರಗಳ ಜೊತೆಗೆ ಕೂಲಂಕಷ ತನಿಖೆ ನಡೆಸಿದ್ದು, ಆರೋಪಿ ವಿರುದ್ಧದ ಅಪರಾಧ ಸಾಬೀತಾದ ಹಿನ್ನೆಲೆ ಶಿಕ್ಷೆ ವಿಧಿಸಿಸಿದ್ದಾರೆ. ಸರ್ಕಾರಿ ಅಭಿಯೋಜಕ ಸಿ.ವೆಂಕಟರಮಣ ಸ್ವಾಮಿ ಸರ್ಕಾರದ ಪರವಾಗಿ ವಾದ ಮಂಡಿದ್ದರು.

ಇದನ್ನೂ ಓದಿ:10 ವರ್ಷಗಳಿಂದ ನಿರಂತರ ಲೈಂಗಿಕ ಕಿರುಕುಳ: 8 ಆರೋಪಿಗಳ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ABOUT THE AUTHOR

...view details