ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆ ಮಂಗಳೂರಿನಲ್ಲಿ ಇಂದು 230 ಜನರ ಗಂಟಲು ದ್ರವದ ಸ್ಯಾಂಪಲ್ ಅನ್ನು ಪರೀಕ್ಷೆಗೆ ರವಾನಿಸಲಾಗಿದೆ.
ಕೊರೊನಾ ಶಂಕೆ: ದ.ಕ.ಜಿಲ್ಲೆಯಲ್ಲಿ ಇಂದು 230 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - ಕೊರೊನಾ ಅಪ್ಡೇಟ್
ದ.ಕ. ಜಿಲ್ಲೆಯಲ್ಲಿ ಇಲ್ಲಿಯವರೆಗೆ 10,905 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 10,556 ಮಂದಿಯ ವರದಿ ಬಂದಿದೆ. ಆ ಪೈಕಿ 10,280 ಮಂದಿಯ ವರದಿ ನೆಗೆಟಿವ್ ಬಂದಿದ್ದು, 276 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ.
ದ.ಕ.ಜಿಲ್ಲೆಯಲ್ಲಿ ಇಂದು 230 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ
ಈವರೆಗೆ ಜಿಲ್ಲೆಯಲ್ಲಿ 10,905 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, 10,556 ಮಂದಿಯ ವರದಿ ಬಂದಿದೆ. ಆ ಪೈಕಿ 10,280 ಮಂದಿಯ ವರದಿ ನೆಗೆಟಿವ್ ಬಂದಿದ್ದು, 276 ಮಂದಿಯಲ್ಲಿ ಸೋಂಕು ದೃಢ ಪಟ್ಟಿದೆ. 153 ಮಂದಿ ಚಿಕಿತ್ಸೆ ಮುಗಿಸಿ ಗುಣಮುಖರಾಗಿ ಮನೆಗೆ ತೆರಳಿದ್ದರೆ, 122 ಸಕ್ರಿಯ ಸೋಂಕಿತರು ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 8 ಮಂದಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆ ತಿಳಿಸಿದೆ.