ಕರ್ನಾಟಕ

karnataka

ETV Bharat / state

ಸಾಕ್ಸ್​ನಲ್ಲಿ ಅಡಗಿಸಿ ಚಿನ್ನ ಸಾಗಣೆ: ಮಂಗಳೂರು ಏರ್​ಪೋರ್ಟ್​ನಲ್ಲಿ 24.44 ಲಕ್ಷ ರೂ. ಮೌಲ್ಯದ ಬಂಗಾರ ವಶಕ್ಕೆ - ಮಂಗಳೂರು ಏರ್​ಪೋರ್ಟ್​ನಲ್ಲಿ 24.44 ಲಕ್ಷ ರೂ. ಮೌಲ್ಯದ ಚಿನ್ನ ವಶಕ್ಕೆ

ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ಆರೋಪಿ ಕಾಲುಚೀಲ(ಸಾಕ್ಸ್​)ದೊಳಗೆ ಚಿನ್ನ ಅಡಗಿಸಿಕೊಂಡಿರುವುದು ಪತ್ತೆಯಾಗಿದೆ.

Gold Seized in Mangaluru Airport
24.44 ಲಕ್ಷ ರೂ. ಮೌಲ್ಯದ ಚಿನ್ನ ವಶ

By

Published : Apr 18, 2021, 11:13 AM IST

ಮಂಗಳೂರು: ಕಾಲುಚೀಲದೊಳಗೆ ಅಡಗಿಸಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಕಾಲುಚೀಲದೊಳಗೆ ಅಡಗಿಸಿ ಚಿನ್ನ ಸಾಗಣೆ: 24.44 ಲಕ್ಷ ರೂ. ಮೌಲ್ಯದ ಬಂಗಾರ ವಶಕ್ಕೆ

ಕಾಸರಗೋಡು ಜಿಲ್ಲೆಯ ಅಬೂಬಕ್ಕರ್ ಸಿದ್ದೀಕ್ ಪುಲಿಕೂರು ಮಹಮ್ಮದ್ ಚಿನ್ನ ಸಾಗಿಸುತ್ತಿದ್ದ ಆರೋಪಿ. ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದ ಆರೋಪಿಯನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ. ಈ ಸಂದರ್ಭ ಆರೋಪಿಯು ಕಾಲುಚೀಲದೊಳಗೆ ಅಡಗಿಸಿ ಚಿನ್ನ ಸಾಗಿಸುತ್ತಿರುವುದು ಪತ್ತೆಯಾಗಿದೆ.

ಸದ್ಯ ಆರೋಪಿಯಿಂದ 504 ಗ್ರಾಂ ತೂಕದ 24.44 ಲಕ್ಷ ರೂ.ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ.

ಓದಿ:ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ : ಮಂಗಳೂರು ವಿಮಾನ ನಿಲ್ದಾಣದಲ್ಲಿ ಓರ್ವನ ಬಂಧನ

ABOUT THE AUTHOR

...view details