ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ತುತ್ತಾಗಿ ಮೂವರು ಸಾವನ್ನಪ್ಪಿದ್ದಾರೆ. 247 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ದ.ಕನ್ನಡದಲ್ಲಿ 247 ಸೋಂಕಿತರು ಪತ್ತೆ....ಮೂವರು ಬಲಿ - Dakshina Kannada latest news
ಜಿಲ್ಲೆಯಲ್ಲಿಂದು 247 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವುದರ ಜೊತೆಗೆ 3 ಮಂದಿ ಮೃತಪಟ್ಟಿದ್ದಾರೆ.
ಇಂದು ಮೃತಪಟ್ಟ ಮೂವರಲ್ಲಿ ಒಬ್ಬರು ಮಂಗಳೂರು ತಾಲೂಕು, ಒಬ್ಬರು ಪುತ್ತೂರು ತಾಲೂಕು ಮತ್ತು ಒಬ್ಬರು ಹೊರಜಿಲ್ಲೆಯವರಾಗಿದ್ದಾರೆ. ಈವರೆಗೆ ಸೋಂಕಿಗೊಳಗಾಗಿ ಸಾವನ್ನಪ್ಪಿದವರ ಸಂಖ್ಯೆ 319ಕ್ಕೆ ಏರಿಕೆಯಾಗಿದೆ.
ಇನ್ನೂ 247 ಮಂದಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. ಈ ಪೈಕಿ 171 ಮಂದಿ ಮಂಗಳೂರು ತಾಲೂಕು, 48 ಮಂದಿ ಬಂಟ್ವಾಳ ತಾಲೂಕು, 6 ಮಂದಿ ಪುತ್ತೂರು ತಾಲೂಕು, 4 ಮಂದಿ ಸುಳ್ಯ ತಾಲೂಕು, 10 ಮಂದಿ ಬೆಳ್ತಂಗಡಿ ತಾಲೂಕು ಮತ್ತು 8 ಮಂದಿ ಹೊರಜಿಲ್ಲೆಯವರಾಗಿದ್ದಾರೆ. ಈ ಮೂಲಕ ಸೋಂಕಿತರ ಸಂಖ್ಯೆ 10778 ಕ್ಕೆ ಏರಿಕೆಯಾಗಿದೆ.
ಇನ್ನೂ 218 ಸೋಂಕಿತರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಈವರೆಗೆ 8,136 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಸದ್ಯ 2,323 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.