ಮಂಗಳೂರು: ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪದಲ್ಲಿ ಪಿಡಬ್ಲ್ಯುಡಿ ಎಇ ಎನ್.ನರಸಿಂಹರಾಜುಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 25 ಲಕ್ಷ ರೂ ದಂಡ ವಿಧಿಸಿದೆ. ಎನ್.ನರಸಿಂಹರಾಜು ಮೇಲಿನ ಆರೋಪ ಸಾಬೀತಾದ ಹಿನ್ನಲೆ, ಆರೋಪಿಗೆ ಮೂರು ವರ್ಷ 6 ಆರು ತಿಂಗಳು ಸಜೆ ಹಾಗೂ 25 ಲಕ್ಷ ರೂ ದಂಡ ವಿಧಿಸಿ ಆದೇಶಿಸಿದೆ.
ಬೆಂಗಳೂರು ದೇವನಹಳ್ಳಿ ಮದ್ದಯ್ಯ ರಸ್ತೆ ನಿವಾಸಿಯಾಗಿರುವ ಎನ್. ನರಸಿಂಹರಾಜು ವಿರುದ್ಧ 2010ರ ಮಾ.24ರಂದು ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಅಂದಿನ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಸದಾನಂದ ಎಂ.ವರ್ಣೇಕರ್ ಅವರು ದೂರು ನೀಡಿ, ಪೊಲೀಸ್ ಉಪಾಧೀಕ್ಷಕ ವಿಠಲ್ ದಾಸ್ ಪೈ ಪ್ರಕರಣದ ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು.