ಮಂಗಳೂರು: ದ.ಕ.ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ರವಿವಾರವೂ 293 ಮಂದಿಗೆ ಸೋಂಕು ದೃಢಪಟ್ಟಿದೆ.
ದ.ಕ.ಜಿಲ್ಲೆಯಲ್ಲಿ ಕೊರೊನಾಕ್ಕೆ ಇಬ್ಬರು ಬಲಿ: 293 ಮಂದಿಗೆ ಸೋಂಕು ದೃಢ - ದಕ್ಷಿಣ ಕನ್ನಡ
ದ.ಕ.ಜಿಲ್ಲೆಯಲ್ಲಿ ಇಂದು 293 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 24 ಸಾವಿರದ ಗಡಿ ದಾಟಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 24 ಸಾವಿರದ ಗಡಿ ದಾಟಿದೆ. ಜಿಲ್ಲೆಯಲ್ಲಿ ಇಂದು ಇಬ್ಬರು ಸೋಂಕಿಗೆ ಬಲಿಯಾಗಿದ್ದು, ಒಟ್ಟು 568 ಮಂದಿ ಮೃತಪಟ್ಟಿದ್ದಾರೆ. ಕೊರೊನಾ ಸೋಂಕಿತರಾಗಿ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಾಗೂ ಹೋಮ್ ಐಸೋಲೇಷನ್ನಲ್ಲಿದ್ದ 434 ಮಂದಿ ಗುಣಮುಖರಾಗಿದ್ದಾರೆ.
ದ.ಕ.ಜಿಲ್ಲೆಯಲ್ಲಿ ಈವರೆಗೆ 1,70,517 ಮಂದಿಯ ಗಂಟಲು ದ್ರವ ಮಾದರಿಯನ್ನು ತಪಾಸಣೆ ಮಾಡಲಾಗಿದೆ. ಅದರಲ್ಲಿ 1,46,205 ಮಂದಿಯಲ್ಲಿ ನೆಗೆಟಿವ್ ಬಂದಿದೆ. 24,312 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ 18,143 ಮಂದಿ ಕೊರೊನಾ ಮುಕ್ತರಾಗಿ ಮನೆಗೆ ತೆರಳಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ 5,601 ಸಕ್ರಿಯ ಪ್ರಕರಣಗಳಿವೆ.