ಕರ್ನಾಟಕ

karnataka

ETV Bharat / state

ಕೊರೊನಾ ಶಂಕೆ: ಮಂಗಳೂರಿನಲ್ಲಿ ಇಂದು‌ 297 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ - ಮಂಗಳೂರಿನಲ್ಲಿ ಇಂದು‌ 297 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ

ಮಂಗಳೂರಿನಲ್ಲಿ ಇಂದು 297 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

297 people throat fluid  to be tested
ಮಂಗಳೂರಿನಲ್ಲಿ ಇಂದು‌ 297 ಮಂದಿಯ ಗಂಟಲು ದ್ರವ ಪರೀಕ್ಷೆಗೆ ರವಾನೆ..

By

Published : Apr 28, 2020, 8:12 PM IST

ಮಂಗಳೂರು: ಕೊರೊನಾ ಶಂಕೆ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 297 ಮಂದಿಯ ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಟ್ಟು 536 ಮಂದಿಯ ವರದಿ ನಿರೀಕ್ಷಿಸಲಾಗುತ್ತಿದೆ.

ಈ ಹಿಂದೆ ಕಳುಹಿಸಲಾದ 101 ಮಂದಿಯ ಗಂಟಲು ದ್ರವದ ಪರೀಕ್ಷೆ ವರದಿಯಲ್ಲಿ 101 ಕೂಡ ನೆಗೆಟಿವ್ ಬಂದಿವೆ. ಈವರೆಗೆ 2057 ಗಂಟಲು ದ್ರವದ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಇದರಲ್ಲಿ 21 ಪಾಸಿಟಿವ್ ಮತ್ತು 2036 ನೆಗೆಟಿವ್ ಬಂದಿವೆ. ಇಂದು 46 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, ಈವರೆಗೆ ಒಟ್ಟು 39,562 ಮಂದಿಯನ್ನು ಸ್ಕ್ರೀನಿಂಗ್ ಮಾಡಿದಂತಾಗಿದೆ. ಇಎಸ್ಐ ಆಸ್ಪತ್ರೆಯಲ್ಲಿ ಕ್ವಾರಂಟೈನ್​ನಲ್ಲಿದ್ದ 40 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. 59 ಮಂದಿ ಎನ್​ಐಟಿಕೆ ಕ್ವಾರಂಟೈನ್​ನಲ್ಲಿ ಇದ್ದಾರೆ. ಇಂದಿಗೆ 6073 ಮಂದಿ 28 ದಿನದ ಹೋಮ್ ಕ್ವಾರಂಟೈನ್ ಪೂರೈಸಿದ್ದಾರೆ.

ಕೊರೊನಾ ಪಾಸಿಟಿವ್ ಬಂದಿದ್ದ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನೂ 7 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ 7 ಮಂದಿಯಲ್ಲಿ ಬಂಟ್ವಾಳದ ಕಸಬಾ ನಿವಾಸಿ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಅಳವಡಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

For All Latest Updates

TAGGED:

ABOUT THE AUTHOR

...view details