ಮಂಗಳೂರು: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇರುವ ಎಂಟು ಕೆರೆಗಳ ಅಭಿವೃದ್ಧಿಗೆ 3.65 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಎಂಟು ಕೆರೆಗಳ ಅಭಿವೃದ್ಧಿಗೆ 3.65 ಕೋಟಿ ರೂ. ಬಿಡುಗಡೆ: ಶಾಸಕ ವೇದವ್ಯಾಸ ಕಾಮತ್ - MLA Vedavyasa Kamath
ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯ ಅನುದಾನದಡಿ ಈ ಹಣ ಬಿಡುಗಡೆಯಾಗಿದೆ. ಕೆರೆಗಳ ಅಭಿವೃದ್ಧಿ ಸದ್ಯದ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಸದ್ಯ 8 ಕೆರೆಗಳ ಅಭಿವೃದ್ಧಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಶಾಸಕ ಕಾಮತ್ ಮಾಹಿತಿ ನೀಡಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಇಲಾಖೆಯ ಅನುದಾನದಡಿ ಈ ಹಣ ಬಿಡುಗಡೆಯಾಗಿದೆ. ಕೆರೆಗಳ ಅಭಿವೃದ್ಧಿ ಸದ್ಯದ ಅವಶ್ಯಕತೆಯಾಗಿದೆ. ಈ ನಿಟ್ಟಿನಲ್ಲಿ ಸದ್ಯ 8 ಕೆರೆಗಳ ಅಭಿವೃದ್ಧಿ ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ ಎಂದರು.
ಕದ್ರಿ ಕೈ ಬಟ್ಟಲು ಕೆರೆ ಅಭಿವೃದ್ಧಿಗೆ 90 ಲಕ್ಷ ರೂ., ಜೋಗಿಮಠ ಕೆರೆ ಅಭಿವೃದ್ಧಿಗೆ 80 ಲಕ್ಷ ರೂ., ಕುಲಶೇಖರ ಕೆರೆ ಅಭಿವೃದ್ಧಿಗೆ 70 ಲಕ್ಷ ರೂ., ಜೆಪ್ಪಿನಮೊಗರು ಕರ್ಬಿಸ್ಥಾನ ಕೆರೆ ಅಭಿವೃದ್ಧಿಗೆ 25 ಲಕ್ಷ ರೂ., ಜಲ್ಲಿಗುಡ್ಡೆ ಕೆರೆ ಅಭಿವೃದ್ಧಿಗೆ 65 ಲಕ್ಷ ರೂ., ಕುದ್ರೋಳಿ ಜುಮ್ಮಾ ಮಸೀದಿ ವಠಾರದ ಕೆರೆ ಅಭಿವೃದ್ಧಿಗೆ 25 ಲಕ್ಷ ರೂ., ಬಜಾಲು ಕುಂದೋಡಿಯ ಕೆರೆ ಅಭಿವೃದ್ಧಿಗೆ 10 ಲಕ್ಷ., ಬೈರಾಡಿ ಕೆರೆಯಲ್ಲಿ 1.20 ಕೋಟಿ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು, ಹೆಚ್ಚುವರಿಯಾಗಿ 70 ಲಕ್ಷ ರೂ,. ಬಿಡುಗಡೆಯಾಗಿದೆ ಎಂದು ಮಾಹಿತಿ ನೀಡಿದರು.