ಕರ್ನಾಟಕ

karnataka

ETV Bharat / state

15 ಠಾಣೆಗಳಲ್ಲಿ 30ಕ್ಕೂ ಹೆಚ್ಚು ಕೇಸ್... ಚಾಲಾಕಿ ಕಳ್ಳ ಕೊನೆಗೂ ಸಿಕ್ಕಿಬಿದ್ದ! - ಉಪ್ಪಿನಂಗಡಿ ಪೊಲೀಸ್ ಠಾಣೆ ಸುದ್ದಿ

ಕಳ್ಳನೋರ್ವನ ವಿರುದ್ಧ 15 ಪೊಲೀಸ್ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ.

ಕಳ್ಳನೋರ್ವನ ವಿರುದ್ಧ 15 ಪೊಲೀಸ್ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ.
ಕಳ್ಳನೋರ್ವನ ವಿರುದ್ಧ 15 ಪೊಲೀಸ್ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ.

By

Published : Feb 20, 2021, 4:30 AM IST

ಉಪ್ಪಿನಂಗಡಿ:ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿವೋರ್ವನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದು, ಈತನ ವಿರುದ್ಧ 15 ಪೊಲೀಸ್ ಠಾಣೆಗಳಲ್ಲಿ 30ಕ್ಕೂ ಹೆಚ್ಚು ಕೇಸ್ ದಾಖಲಾಗಿವೆ.

ಉಪ್ಪಿನಂಗಡಿ ಪೇಟೆಯಲ್ಲಿರುವ ಸತೀಶ್ ಯಾನೆ ಲಕ್ಷ್ಮೀ ನಾರಾಯಣ ನಾಯಕ್ ಎಂಬುವರ ಅಂಗಡಿಯಲ್ಲಿ 2020, ನವೆಂಬರ್ 10ರ ರಾತ್ರಿ ಕಳ್ಳತನ ನಡೆದಿತ್ತು. 45 ಸಾವಿರ ನಗದು ಕದ್ದು ಎಸ್ಕೇಪ್ ಆಗಿದ್ದರು. ಈ ಬಗ್ಗೆ ಉಪ್ಪಿನಂಗಡಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಅಂತೆಯೇ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ ಎನ್ ಅವರ ನೇತೃತ್ವದಲ್ಲಿ ಅಪರಾಧ ಪತ್ತೆ ತಂಡವನ್ನು ರಚಿಸಿ, ಕಳ್ಳರ ಬಂಧನಕ್ಕೆ ಬಲೆ ಬೀಸಲಾಗಿತ್ತು. ಇದೀಗ ಪ್ರಕರಣ ಬೇಧಿಸಿರುವ ಉಪ್ಪಿನಂಗಡಿ ಪೊಲೀಸರು, ಬೆಳ್ತಂಗಡಿ ತಾಲೂಕಿನ ಪಡಂಗಡಿ ನಿವಾಸಿ ಹಮೀದ್ ಯಾನೆ ಕುಂಞ ಮೋನು (46) ಎಂಬಾತನನ್ನು ಬಂಧಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಹಮೀದ್ ಮೇಲೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ಕೊಡಗು ಜಿಲ್ಲೆಗಳಲ್ಲಿನ 15 ಪೊಲೀಸ್ ಠಾಣೆಗಳಲ್ಲಿ ಸುಮಾರು 30 ಕ್ಕಿಂತಲೂ ಹೆಚ್ಚಿನ ಕಳ್ಳತನ ಪ್ರಕರಣಗಳು ದಾಖಲಾಗಿವೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೋರ್ವ ಆರೋಪಿ ಬಂಟ್ವಾಳ ಸಜಿಪ ನಿವಾಸಿಯಾದ ಫಾರೂಕ್ ಯಾನೆ ಉಮ್ಮರ್ ಫಾರೂಕ್ ಎಂಬಾತನನ್ನು ಈಗಾಗಲೇ ವಿಟ್ಲ ಪೊಲೀಸರು ಬಂಧಿಸಿದ್ದು, ಈತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈ ಪ್ರಕರಣದಲ್ಲಿ ಭಾಗಿಯಾದ

ಪೊಲೀಸ್ ಅಧೀಕ್ಷಕರಾದ ಲಕ್ಷ್ಮಿ ಪ್ರಸಾದ್ ಹಾಗೂ ಪುತ್ತೂರು ಉಪ ವಿಭಾಗದ ಉಪಾಧೀಕ್ಷಕರಾದ ಗಾನ‌ ಪಿ‌ ಕುಮಾರ್ ಅವರ ನಿರ್ದೇಶನದಲ್ಲಿ ಮತ್ತು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾದ ಉಮೇಶ್ ಉಪ್ಪಳಿಕೆ ಅವರ ಮಾರ್ಗದರ್ಶನದಲ್ಲಿ ಉಪ್ಪಿನಂಗಡಿ ಠಾಣಾ ಪಿಎಸ್‌ಐ ಈರಯ್ಯ ಡಿ ಎನ್‌ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಎಸ್‌ಐ ಚೋಮ ಎಂ ಪಿ , ಹರಿಶ್ಚಂದ್ರ, ಇರ್ಷಾದ್‌ ಪಿ, ಜಗದೀಶ್, ಪ್ರತಾಪ್, ಜಿಲ್ಲಾ ಗಣಕ ಯಂತ್ರದ ಸಿಬ್ಬಂದಿಗಳಾದ ದಿವಾಕರ ಮತ್ತು ಸಂಪತ್‌, ಚಾಲಕ ಕನಕರಾಜ್ ಅವರು ಪ್ರಕರಣ ಬೇಧಿಸಿದ್ದಾರೆ.

ABOUT THE AUTHOR

...view details