ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾ ಸೋಂಕಿನಿಂದ 6 ಜನರಯ ಮೃತಪಟ್ಟಿದ್ದು, 310 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡದಲ್ಲಿ ಇಂದು 310 ಜನರಿಗೆ ಕೊರೊನಾ ದೃಢ: ಆರು ಸೋಂಕಿತರ ಸಾವು
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 310 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಆರು ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡದಲ್ಲಿ ಇಂದು 310 ಜನರಿಗೆ ಕೊರೊನಾ ದೃಢ
ಇದುವರೆಗೂ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 418ಕ್ಕೆ ಏರಿಕೆಯಾಗಿದೆ. ಇಂದು ಸೋಂಕು ಪತ್ತೆಯಾದ ಸಂಖ್ಯೆಯಲ್ಲಿ 188 ಜನರು ಮಂಗಳೂರು ತಾಲೂಕು, 27 ಮಂದಿ ಬಂಟ್ವಾಳ ತಾಲೂಕು, 25 ಪುತ್ತೂರು ತಾಲೂಕು, 25 ಮಂದಿ ಸುಳ್ಯ ತಾಲೂಕು, 26 ಮಂದಿ ಬೆಳ್ತಂಗಡಿ ತಾಲೂಕು ಮತ್ತು 19 ಮಂದಿ ಹೊರ ಜಿಲ್ಲೆಯವರಾಗಿದ್ದಾರೆ ಎಂದು ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಈವರೆಗೆ 15,762 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಇಂದು 256 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 12,242 ಮಂದಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ. 3,102 ಸಕ್ರಿಯ ಪ್ರಕರಣಗಳು ಇವೆ.